ನವದೆಹಲಿ:ಅನಾರೋಗ್ಯದಿಂದಾಗಿ ರಿಮ್ಸ್ನಿಂದ(ರಾಂಚಿ ರಾಜೇಂದ್ರ ವೈದ್ಯಕೀಯ ವಿಜ್ಞಾನ ಸಂಸ್ಥೆ) ದೆಹಲಿಯ ಏಮ್ಸ್‌ಗೆ ದಾಖಲಾಗಿದ್ದ ಆರ್ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಡಿಸ್ಚಾರ್ಜ್ ಆಗಿ ಕೆಲವೇ ಗಂಟೆಗಳಲ್ಲಿ ಮರಳಿ ಆಸ್ಪತ್ರೆಗೆ ದಾಖಲಾದರು. ಆರೋಗ್ಯ ಸ್ಥಿತಿ ಹದೆಗೆಟ್ಟ ಕಾರಣ ನಿನ್ನೆ ಅವರನ್ನು ರಿಮ್ಸ್ಗೆ ದಾಖಲಿಸಲಾಗಿತ್ತು. ಇದಾದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ರಾತ್ರಿ 9 ಗಂಟೆಗೆ ದೆಹಲಿ ಏಮ್ಸ್‌ಗೆ ವರ್ಗಾವಣೆ ಮಾಡಲಾಗಿದೆ.
ಲಾಲುಗೆ ಬಹು ಆರೋಗ್ಯ ಸಮಸ್ಯೆ:ಮೂತ್ರಪಿಂಡ, ರಕ್ತದೊತ್ತಡ ಸೇರಿದಂತೆ ಅನೇಕ ಸಮಸ್ಯೆಗಳಿಂದ ಲಾಲೂ ಪ್ರಸಾದ್ ಯಾದವ್ ಬಳಲುತ್ತಿದ್ದಾರೆ. ಈ ವಿಚಾರವಾಗಿ ಮಾತನಾಡಿರುವ ಪುತ್ರ ತೇಜಸ್ವಿ ಯಾದವ್, ಏಮ್ಸ್ನಲ್ಲಿ ತಂದೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಅವರ ರಕ್ತದಲ್ಲಿ ಸಕ್ಕರೆ ಅಂಶ ಮತ್ತು ರಕ್ತದೊತ್ತಡದಲ್ಲಿ ಏರಿಳಿತವಾಗುತ್ತಿದೆ ಎಂದು ತಿಳಿಸಿದರು.