ನವದೆಹಲಿ: ಮಹಾಮಾರಿ ಕೊರೊನಾ ಸೋಂಕಿಗೆ ಒಳಗಾಗಿದ್ದ ಉತ್ತರ ಪ್ರದೇಶದ ರಾಷ್ಟ್ರೀಯ ಲೋಕ ದಳ (ಆರ್‌ಎಲ್‌ಡಿ) ಪಕ್ಷದ ಮುಖ್ಯಸ್ಥ ಮತ್ತು ಮಾಜಿ ಕೇಂದ್ರ ಸಚಿವ ಚೌಧರಿ ಅಜಿತ್ ಸಿಂಗ್ (82) ಇಂದು ಕೊನೆಯುಸಿರೆಳೆದಿದ್ದಾರೆ.
ಕೋವಿಡ್ ದೃಢಪಟ್ಟ ಬಳಿಕ ಗುರುಗ್ರಾಮ್‌ನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಅಜಿತ್ ಸಿಂಗ್ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಶ್ವಾಸಕೋಶದ ಸೋಂಕಿನಿಂದಾಗಿ ಕಳೆದೆರಡು ದಿನಗಳಿಂದ ಅವರ ಸ್ಥಿತಿ ಚಿಂತಾಜನಕವಾಗಿತ್ತು.