ನವದೆಹಲಿ: ಬಿಹಾರ ಕೂಡ ಉತ್ತರಪ್ರದೇಶದ ಸಾಲಿನಲ್ಲಿ ನಿಲ್ಲಬೇಕು ಎಂದು ರಾಷ್ಟ್ರೀಯ ಲೋಕ ಸಮತಾ ಪಕ್ಷದ (ಆರ್‌ಎಲ್‌ಎಸ್‌ಪಿ) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮಾಧವ್ ಆನಂದ್ ಇಂದು ಹೇಳಿದ್ದಾರೆ.
ಹೊಸ ಅಬಕಾರಿ ನೀತಿ ಪ್ರಕಾರ ಮನೆಯಲ್ಲಿ ನಿಗದಿತ ಮಿತಿಗಿಂತ ಹೆಚ್ಚು ಮದ್ಯವನ್ನು ಇಟ್ಟುಕೊಳ್ಳಲು ಪರವಾನಗಿ ಹೊಂದಿರುವುದು ಕಡ್ಡಾಯ ಎಂದು ಉತ್ತರ ಪ್ರದೇಶ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರದ ಈ ನಿರ್ಧಾರವು ಸ್ವಾಗತಾರ್ಹ, ಇದು ಆಲ್ಕೋಹಾಲ್ ಗ್ರಾಹಕರಿಗೆ ಹೆಚ್ಚು ಪ್ರಯೋಜನಕಾರಿಯಾಗಲಿದೆ ಮತ್ತು ರಾಜ್ಯ ಸರ್ಕಾರಕ್ಕೆ ಹೆಚ್ಚಿನ ಆದಾಯವನ್ನು ನೀಡುತ್ತದೆ ಎಂದರು.