ಶ್ರೀನಗರ (ಜಮ್ಮು ಮತ್ತು ಕಾಶ್ಮೀರ): ಇಲ್ಲಿನ ರಾಷ್ಟ್ರೀಯ ಹೆದ್ದಾರಿ ಉಧಂಪುರ ಜಿಲ್ಲೆಯ ಚೆನಾನಿ ಬಳಿ ರಸ್ತೆ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಅಸುನೀಗಿದ್ದಾರೆ. ರಾಂಬನ್ ಜಿಲ್ಲೆಯ ಸಂಗಲ್ದನ್ನಿಂದ ಜಮ್ಮು ಕಡೆಗೆ ಬರುತ್ತಿದ್ದ ಮಾರುತಿ ಕಾರು ಚೆನಾನಿಯ ಪ್ರೇಮ್ ಮಂದಿರದ ಬಳಿ ತಲುಪಿದಾಗ ಚಾಲಕನ ನಿಯಂತ್ರಣ ತಪ್ಪಿ ಆಳ ಕಮರಿಗೆ ಬಿದ್ದಿದೆ. ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದರೆ, ಇನ್ನಿಬ್ಬರನ್ನು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ.
ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸಾವು - ರಸ್ತೆ ಅಪಘಾತದಲ್ಲಿ ಸಾವು
ಉಧಂಪುರ ಜಿಲ್ಲೆಯ ಚೆನಾನಿ ಬಳಿ ರಸ್ತೆ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ.
![ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸಾವು 4 Dead in road accident at Chenani NHW](https://etvbharatimages.akamaized.net/etvbharat/prod-images/768-512-17051836-thumbnail-3x2-tha.jpg)
ಜಮ್ಮು-ಶ್ರಿನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ; ಒಂದೇ ಕುಟುಂಬದ ನಾಲ್ವರು ಸಾವು