ಬಂಡಾ(ಉತ್ತರಪ್ರದೇಶ):ಇನ್ನೋವಾ ಕಾರು - ಆಟೋ ಮಧ್ಯೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಏಳು ಮಂದಿ ದುರ್ಮರಣಕ್ಕೀಡಾಗಿದ್ದಾರೆ. ಉತ್ತರ ಪ್ರದೇಶದ ಬಂಡಾದಲ್ಲಿ ಈ ಘಟನೆ ನಡೆದಿದೆ. ಗಾಯಗೊಂಡಿರುವ ಅನೇಕರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ಕಾರು - ಆಟೋ ಮಧ್ಯೆ ಭೀಕರ ರಸ್ತೆ ಅಪಘಾತ: ಸ್ಥಳದಲ್ಲೇ 7 ಮಂದಿ ದುರ್ಮರಣ - ಉತ್ತರ ಪ್ರದೇಶದಲ್ಲಿ ಕಾರು ಆಟೋ ಅಪಘಾತ
ಕುಡಿದ ಅಮಲಿನಲ್ಲಿ ಕಾರು ಚಲಾವಣೆ ಮಾಡಿರುವ ಡ್ರೈವರ್ ಆಟೋಗೆ ಡಿಕ್ಕಿ ಹೊಡೆಸಿದ್ದು, ಪರಿಣಾಮ ಏಳು ಮಂದಿ ದುರ್ಮರಣಕ್ಕೀಡಾಗಿದ್ದಾರೆ.
![ಕಾರು - ಆಟೋ ಮಧ್ಯೆ ಭೀಕರ ರಸ್ತೆ ಅಪಘಾತ: ಸ್ಥಳದಲ್ಲೇ 7 ಮಂದಿ ದುರ್ಮರಣ road accident in banda](https://etvbharatimages.akamaized.net/etvbharat/prod-images/768-512-15962252-thumbnail-3x2-wdfddfd.jpg)
ನಗರದ ಗಿರ್ವಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬಸ್ ನಿಲ್ದಾಣದ ಬಳಿ ವೇಗವಾಗಿ ಬಂದ ಇನ್ನೋವಾ ಕಾರು ಆಟೋಗೆ ಡಿಕ್ಕಿ ಹೊಡೆದಿದೆ. ಈ ಘಟನೆಯಲ್ಲಿ ಆಟೋದಲ್ಲಿದ್ದ 5 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಅರ್ಧ ಡಜನ್ ಜನರು ಗಾಯಗೊಂಡಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ವೇಳೆ ಮತ್ತಿಬ್ಬರು ಸಾವನ್ನಪ್ಪಿದ್ದಾರೆ. ಉಳಿದವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಇನ್ನೋವಾ ಕಾರು ಡಿಕ್ಕಿ ಹೊಡೆದಿರುವ ರಭಸಕ್ಕೆ ಆಟೋ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.
ಲಭ್ಯವಾಗಿರುವ ಮಾಹಿತಿ ಪ್ರಕಾರ ಇನ್ನೋವಾ ಕಾರು ಚಾಲಕ ಕುಡಿದ ಮತ್ತಿನಲ್ಲಿ ಅತೀ ವೇಗವಾಗಿ ವಾಹನ ಚಲಾವಣೆ ಮಾಡಿದ ಪರಿಣಾಮ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗ್ತಿದೆ. ಘಟನಾ ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಭೇಟಿ ನೀಡಿದ್ದು, ಮೃತದೇಹಗಳನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.