ನವದೆಹಲಿ:ಗಾಜಿಯಾಬಾದ್ನ ಮಸ್ಸೂರಿ ಪ್ರದೇಶದ ದೆಹಲಿ-ಮೀರತ್ ಎಕ್ಸ್ಪ್ರೆಸ್ ವೇಯಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಡಿಕ್ಕಿ ಸಂಭವಿಸಿದ್ದು, ಐವರು ದಾರುಣವಾಗಿ ಸಾವನ್ನಪ್ಪಿದ್ದಾರೆ.
ಮೃತಪಟ್ಟವರಲ್ಲಿ ಇಬ್ಬರು ಮಹಿಳೆಯರು, ಇಬ್ಬರು ಪುರುಷರು ಮತ್ತು ಒಂದು ಮಗು ಸೇರಿದೆ ಎಂದು ತಿಳಿದು ಬಂದಿದೆ. ಇನ್ನು ಇಬ್ಬರು ಮಕ್ಕಳಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.