ಟ್ರಕ್ ಮತ್ತು ಪಿಕ್ ಅಪ್ ವಾಹನ ಮುಖಾಮುಖಿ ಡಿಕ್ಕಿ: 6 ಮಂದಿ ದುರ್ಮರಣ - 6 ಮಂದಿ ದುರ್ಮರಣ
07:47 February 09
ಉತ್ತರ ಪ್ರದೇಶದಲ್ಲಿ ಬೆಳ್ಳಂಬೆಳಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಟ್ರಕ್ ಮತ್ತು ಪಿಕ್ ಅಪ್ ವಾಹನ ಮುಖಾಮುಖಿ ಡಿಕ್ಕಿಯಾಗಿ 6 ಜನ ಸಾವನ್ನಪ್ಪಿದ್ದಾರೆ.
ಜಲಾಲ್ಪುರ: ಉತ್ತರಪ್ರದೇಶದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು,6 ಮಂದಿ ಮೃತಪಟ್ಟಿದ್ದಾರೆ.
ಟ್ರಕ್ ಮತ್ತು ಪಿಕ್ ಅಪ್ ವಾಹನ ಮುಖಾಮುಖಿ ಡಿಕ್ಕಿಯಾಗಿ ಈ ದರಂತ ಸಂಭವಿಸಿದೆ. ಜೌನ್ಪುರ ಜಿಲ್ಲೆಯ ಜಲಾಲ್ಪುರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಘಟನಾ ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಂಜಯ್ ಕುಮಾರ್ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಅಪಘಾತದಲ್ಲಿ ಐದು ಜನರು ಸ್ಥಳದಲ್ಲೇ ಮೃತಪಟ್ಟರೆ, ಮತ್ತೋರ್ವ ವ್ಯಕ್ತಿ ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಮೃತಪಟ್ಟಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.