ಲಖನೌ (ಉತ್ತರಪ್ರದೇಶ) : ಆಗ್ರ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಜರುಗಿದ ಎರಡು ರಸ್ತೆ ಅಪಘಾತಗಳಲ್ಲಿ ಸುಮಾರು 7 ಜನ ಸಾವನ್ನಪ್ಪಿದ್ದು, 30 ಮಂದಿ ಗಾಯಗೊಂಡಿದ್ದಾರೆ. ಪೊಲೀಸರು ಸ್ಥಳಕ್ಕೆ ದೌಡಾಯಿಸಿ ರಕ್ಷಣಾ ಕಾರ್ಯ ಕೈಗೊಂಡಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕನ್ನೌಜ್ನಲ್ಲಿ ಮೂವರು ಸಾವು:ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯ ಥಾಥಿಯಾ ಪೊಲೀಸ್ ಠಾಣೆ ವ್ಯಾಪ್ತಿಯ ಪಿಪ್ರೌಲಿ ಗ್ರಾಮದ ಬಳಿ ಇಂದು ನಸುಕಿನ ಜಾವ ದಟ್ಟ ಮಂಜಿನಿಂದಾಗಿ ರಸ್ತೆ ಬದಿ ನಿಂತಿದ್ದ ಟ್ರಕ್‌ಗೆ ಬಸ್ ಡಿಕ್ಕಿ ಹೊಡೆದು ನೆಲಕ್ಕುರುಳಿತು. ಇದರಲ್ಲಿ 11 ವರ್ಷದ ಬಾಲಕ ಸೇರಿದಂತೆ ಮೂವರು ಸಾವನ್ನಪ್ಪಿದ್ದು, ಸುಮಾರು 17 ಪ್ರಯಾಣಿಕರು ಗಾಯಗೊಂಡಿದ್ದಾರೆ. ಪೊಲೀಸರು ಮತ್ತು ಯುಪಿಐಡಿಎ ತಂಡ ಸ್ಥಳಕ್ಕೆ ದೌಡಾಯಿಸಿ ರಕ್ಷಣಾ ಕಾರ್ಯ ಕೈಗೊಂಡರು. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಆರು ಮಂದಿಯನ್ನು ವೈದ್ಯಕೀಯ ಕಾಲೇಜು ತಿರ್ವಾಗೆ ದಾಖಲಿಸಲಾಗಿದೆ. ಬಸ್ ದೆಹಲಿಯಿಂದ ಲಖನೌಗೆ ಹೋಗುತ್ತಿತ್ತು ಎಂದು ಹೇಳಲಾಗುತ್ತಿದೆ.
ಖಾಸಗಿ ಸ್ಲೀಪರ್ ಬಸ್ ದೆಹಲಿಯಿಂದ ಪ್ರಯಾಣಿಕರನ್ನು ಹೊತ್ತು ಲಖನೌಗೆ ತೆರಳುತ್ತಿತ್ತು. ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಥಾಥಿಯಾ ಪೊಲೀಸ್ ಠಾಣೆ ವ್ಯಾಪ್ತಿಯ ಪಿಪ್ರೌಲಿ ಗ್ರಾಮದ ಬಳಿ ಅತಿ ವೇಗವಾಗಿ ಚಲಿಸುತ್ತಿದ್ದ ಬಸ್ ದಟ್ಟ ಮಂಜಿನಿಂದಾಗಿ ಎಕ್ಸ್‌ಪ್ರೆಸ್‌ವೇಯಲ್ಲಿ ನಿಂತಿದ್ದ ಟ್ರಕ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಬಸ್ ನಿಯಂತ್ರಣ ಕಳೆದುಕೊಂಡು ಎಕ್ಸ್‌ಪ್ರೆಸ್‌ವೇಯ ಕೆಳಗೆ ಬಿದ್ದಿದೆ. ಬಸ್ ಬಿದ್ದ ತಕ್ಷಣ ಪ್ರಯಾಣಿಕರಲ್ಲಿ ನೂಕುನುಗ್ಗಲು ಉಂಟಾಗಿದೆ. ಬಸ್‌ನಿಂದ ಕಿರುಚಾಟ ಕೇಳಿದ ಗ್ರಾಮಸ್ಥರು ಸ್ಥಳಕ್ಕೆ ದೌಡಾಯಿಸಿ ರಕ್ಷಣಾ ಕಾರ್ಯ ಕೈಗೊಂಡರು.