ನವದೆಹಲಿ:ಉದ್ಯೋಗ ಮೇಳದ ಅಡಿ ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಹೊಸದಾಗಿ ನೇಮಕಗೊಂಡ 51 ಸಾವಿರಕ್ಕೂ ಹೆಚ್ಚು ಉದ್ಯೋಗಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ನೇಮಕಾತಿ ಪತ್ರಗಳನ್ನು ವಿತರಿಸಿದರು. ಇದೇ ಸಂದರ್ಭದಲ್ಲಿ ಪ್ರಧಾನಿಯವರು ನೇಮಕಾತಿ ಪತ್ರ ಪಡೆದ ಯುವಕರನ್ನು ಉದ್ದೇಶಿಸಿ ಮಾತನಾಡಿದರು. ಉದ್ಯೋಗ ಸೃಷ್ಟಿಗೆ ಹೆಚ್ಚಿನ ಆದ್ಯತೆ ನೀಡುವ ಪ್ರಧಾನ ಮಂತ್ರಿ ಅವರ ಬದ್ಧತೆ ಈಡೇರಿಸುವ ನಿಟ್ಟಿನಲ್ಲಿ ಉದ್ಯೋಗ ಮೇಳವು ಒಂದು ಹೆಜ್ಜೆಯಾಗಿದೆ.
ಬೆಳಗ್ಗೆ 10:30ಕ್ಕೆ ಪ್ರಧಾನಮಂತ್ರಿಗಳ ವಿಡಿಯೋ ಕಾನ್ಫರೆನ್ಸ್ ಮೂಲಕ ನೇಮಕಾತಿ ಪತ್ರಗಳನ್ನು ವಿತರಿಸಿದರು. ಯುವಕರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ವಿವಿಧ ಪಡೆಗಳಲ್ಲಿ ಸೇವೆ ಸಲ್ಲಿಸಲು ಹೊಸದಾಗಿ ಸೇರ್ಪಡೆಗೊಂಡ ಸಿಬ್ಬಂದಿಗೆ ಅಭಿನಂದನೆಗಳು. ದೇಶವೇ ಹೆಮ್ಮೆ, ಆತ್ಮವಿಶ್ವಾಸ ತುಂಬಿರುವ ಇಂತಹ ವಾತಾವರಣದಲ್ಲಿ ಈ ಬಾರಿ ಉದ್ಯೋಗ ಮೇಳ ಆಯೋಜಿಸಲಾಗುತ್ತಿದೆ ಎಂದರು.
ಕಳೆದ ಕೆಲವು ವರ್ಷಗಳಲ್ಲಿ ಅರೆಸೇನಾ ಪಡೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ನಾವು ಅನೇಕ ಪ್ರಮುಖ ಬದಲಾವಣೆಗಳನ್ನು ಮಾಡಿದ್ದೇವೆ. ಯಾವುದೇ ಆರ್ಥಿಕತೆ ಮುಂದುವರಿಯಬೇಕಾದರೆ ದೇಶದ ಪ್ರತಿಯೊಂದು ಕ್ಷೇತ್ರವೂ ಅಭಿವೃದ್ಧಿ ಹೊಂದುವುದು ಅವಶ್ಯಕ. ಕಳೆದ 9 ವರ್ಷಗಳ ನಮ್ಮ ಪ್ರಯತ್ನದಿಂದ, ಬದಲಾವಣೆಯ ಮತ್ತೊಂದು ಹೊಸ ಹಂತವು ಕಾಣಿಸಿಕೊಳ್ಳಲು ಪ್ರಾರಂಭಿಸಿದೆ. ಪ್ರಧಾನ ಮಂತ್ರಿ ಜನ್ ಧನ್ ಯೋಜನೆಯು ಹಳ್ಳಿಗಳು ಮತ್ತು ಬಡವರ ಆರ್ಥಿಕ ಸಬಲೀಕರಣದಲ್ಲಿ ಮತ್ತು ಉದ್ಯೋಗ ಸೃಷ್ಟಿಯಲ್ಲಿ ದೊಡ್ಡ ಪಾತ್ರವನ್ನು ವಹಿಸಿದೆ.
ದೇಶಾದ್ಯಂತ 45 ಸ್ಥಳಗಳಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿತ್ತು. ಈ ಉದ್ಯೋಗ ಮೇಳ ಕಾರ್ಯಕ್ರಮದ ಮೂಲಕ, ಗೃಹ ವ್ಯವಹಾರಗಳ ಸಚಿವಾಲಯವು ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF), ಗಡಿ ಭದ್ರತಾ ಪಡೆ (BSF), ಸಶಸ್ತ್ರ ಸೀಮಾ ಬಾಲ್ (SSB), ಅಸ್ಸೋಂ ರೈಫಲ್ಸ್, ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ (CAPFs) ಸಿಬ್ಬಂದಿಯನ್ನು ನೇಮಿಸಿಕೊಳ್ಳುತ್ತಿದೆ.
ಇದರೊಂದಿಗೆ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್), ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ) ಮತ್ತು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಹಾಗೂ ದೆಹಲಿ ಪೊಲೀಸರನ್ನೂ ಸೇರಿಸಲಾಗಿದೆ. ದೇಶಾದ್ಯಂತ ಆಯ್ಕೆಯಾದ ಹೊಸ ನೇಮಕಾತಿಗಳು ಗೃಹ ಸಚಿವಾಲಯದ ಅಡಿಯಲ್ಲಿ ಕಾನ್ಸ್‌ಟೇಬಲ್ (ಜನರಲ್ ಡ್ಯೂಟಿ), ಸಬ್-ಇನ್ಸ್ಪೆಕ್ಟರ್ (ಜನರಲ್ ಡ್ಯೂಟಿ) ಮತ್ತು ನಾನ್ - ಜನರಲ್ ಡ್ಯೂಟಿ ಕೇಡರ್‌ನಂತಹ ವಿವಿಧ ಹುದ್ದೆಗಳಲ್ಲಿ ವಿವಿಧ ಸಂಸ್ಥೆಗಳಿಗೆ ಸೇರಿಕೊಳ್ಳುತ್ತವೆ.
CAPF ಗಳ ಜೊತೆಗೆ ದೆಹಲಿ ಪೊಲೀಸರನ್ನು ಬಲಪಡಿಸುವುದು ಈ ಪಡೆಗಳು ಆಂತರಿಕ ಭದ್ರತೆ, ಭಯೋತ್ಪಾದನೆ ನಿಗ್ರಹ, ಬಂಡಾಯವನ್ನು ಎದುರಿಸಲು, ಉಗ್ರಗಾಮಿ ವಿರೋಧಿ ಮತ್ತು ದೇಶದ ಗಡಿಗಳನ್ನು ಕಾಪಾಡುವಲ್ಲಿ ಸಹಾಯ ಮಾಡುತ್ತದೆ. ಉದ್ಯೋಗ ಮೇಳವು ಮತ್ತಷ್ಟು ಉದ್ಯೋಗ ಸೃಷ್ಟಿಗೆ ವೇಗವರ್ಧಕವಾಗಿ ಕಾರ್ಯನಿರ್ವಹಿಸುತ್ತದೆ ಮತ್ತು ಯುವಜನರಿಗೆ ಅವರ ಸಬಲೀಕರಣ ಮತ್ತು ರಾಷ್ಟ್ರೀಯ ಅಭಿವೃದ್ಧಿಯಲ್ಲಿ ಭಾಗವಹಿಸುವಿಕೆಗೆ ಅರ್ಥಪೂರ್ಣ ಅವಕಾಶಗಳನ್ನು ಒದಗಿಸುತ್ತದೆ ಎಂದು ಸರ್ಕಾರ ಭಾವಿಸುತ್ತದೆ.
ಓದಿ:50 ವರ್ಷಗಳ ಬಳಿಕ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಮೊದಲ ಚಿನ್ನ ಗೆದ್ದ ಭಾರತೀಯ.. ನೀರಜ್ ಮನೆಯಲ್ಲಿ ಸಂಭ್ರಮ!