ನವದೆಹಲಿ:ಸುಕೇಶ್ ಚಂದ್ರಶೇಖರ್ ವಿರುದ್ಧದ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಜಾಕ್ವೆಲಿನ್ ಫರ್ನಾಂಡಿಸ್ ಅವರ 7 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದೆ.
ವಂಚಕ ಸುಕೇಶ್ ಚಂದ್ರಶೇಖರ್ ನಡೆಸಿದ್ದಾನೆ ಎನ್ನಲಾದ 200 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ಸಿಲುಕಿರುವ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರಿಂದ ದೆಹಲಿಯಲ್ಲಿರುವ ಜಾರಿ ನಿರ್ದೇಶನಾಲಯ ಆಸ್ತಿ ಜಪ್ತಿ ಮಾಡಿದೆ. ಉದ್ಯಮಿಯೊಬ್ಬರ ಪತ್ನಿಗೆ 200 ಕೋಟಿ ರೂಪಾಯಿ ವಂಚಿಸಿರುವ ಆರೋಪದಡಿ ಸುಕೇಶ್ ಚಂದ್ರಶೇಖರ್ನನ್ನು ಜಾರಿ ನಿರ್ದೇಶನಾಲಯ (ಇಡಿ)ದ ಅಧಿಕಾರಿಗಳು ಬಂಧಿಸಿದಾಗ ನಟಿ ಜಾಕ್ವೆಲಿನ್ ಹಾಗೂ ಸುಕೇಶ್ ಚಂದ್ರಶೇಖರ್ ನಡುವಿನ ಸಂಬಂಧ ಬಯಲಾಗಿತ್ತು.