ಕರ್ನಾಟಕ

karnataka

ETV Bharat / bharat

ಕಣ್ಣೂರಿನ ತಲಶ್ಶೇರಿಯಲ್ಲಿ ಬಾಂಬ್ ಸ್ಪೋಟ: ಅಂಗೈ ಕಳೆದುಕೊಂಡ ಆರ್​ಎಸ್​ಎಸ್​ ಕಾರ್ಯಕರ್ತ - ಉಮರ್ ಫಾರೂಕ್ ನೇತೃತ್ವದಲ್ಲಿ ನಡೆದ ಸಭೆ

ಕೇರಳದ ತಲಶ್ಮೇರಿಯಲ್ಲಿ ನಡೆದ ಬಾಂಬ್ ಸ್ಪೋಟದಲ್ಲಿ ಆರ್​ಎಸ್​ಎಸ್​ ಕಾರ್ಯಕರ್ತರೊಬ್ಬರು ಎರಡೂ ಅಂಗೈ ಕಳೆದುಕೊಂಡಿದ್ದಾರೆ.

ಆರ್‌ಎಸ್‌ಎಸ್ ಕಾರ್ಯಕರ್ತ
ಆರ್‌ಎಸ್‌ಎಸ್ ಕಾರ್ಯಕರ್ತ

By

Published : Apr 12, 2023, 9:15 PM IST

ಕೇರಳ :ಕಣ್ಣೂರಿನ 20 ವರ್ಷದ ಆರ್‌ಎಸ್‌ಎಸ್ ಕಾರ್ಯಕರ್ತ ಬಾಂಬ್ ಸ್ಫೋಟದಲ್ಲಿ ತನ್ನ ಅಂಗೈಗಳನ್ನು ಕಳೆದುಕೊಂಡಿದ್ದಾರೆ. ಇದು ಬಾಂಬ್ ತಯಾರಿಕೆಯ ಸಮಯದಲ್ಲಿ ಸಂಭವಿಸಿದ ಅಪಘಾತ ಎಂದು ಪೊಲೀಸರು ಶಂಕಿಸಿದ್ದಾರೆ.

ವಿವರ: ತಲಶ್ಶೇರಿಯಲ್ಲಿ ಘಟನೆ ನಡೆದಿದೆ. ಗಾಯಾಳುವನ್ನು ಎರಂಜೋಳಿಪಾಲಂ ಮೂಲದ ವಿಷ್ಣು (20) ಎಂದು ಗುರುತಿಸಲಾಗಿದೆ. ಬುಧವಾರ ಮಧ್ಯರಾತ್ರಿ ಇವರ ಮನೆಯ ಹಿಂಬದಿಯಲ್ಲಿ ಸ್ಫೋಟ ಸಂಭವಿಸಿದೆ. ವಿಷ್ಣು ಅವರನ್ನು ಕ್ಯಾಲಿಕಟ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಫೋಟಕಗಳ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದಕ್ಕಾಗಿ ಯುವಕನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಇನ್ನೊಂದೆಡೆ, ಕೊಯಮತ್ತೂರು ಕಾರ್​ ಬಾಂಬ್​, ಕರ್ನಾಟಕದ ಮಂಗಳೂರಿನಲ್ಲಿ ಕುಕ್ಕರ್​ ಬಾಂಬ್​ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್​ಐಎ) ತಮಿಳುನಾಡು, ಕರ್ನಾಟಕ, ಕೇರಳದ ವಿವಿಧ ಪ್ರದೇಶಗಳ ಮೇಲೆ (ಫೆಬ್ರವರಿ15 - 2023) ಮಿಂಚಿನ ದಾಳಿ ನಡೆಸಿತ್ತು.

2022ರ ಅಕ್ಟೋಬರ್​ 23 ರಂದು ಕೊಯಮತ್ತೂರು, ನವೆಂಬರ್​ 19 ರಂದು ಮಂಗಳೂರಿನಲ್ಲಿ ಬಾಂಬ್​ ಸ್ಫೋಟ ಸಂಭವಿಸಿದ್ದವು. ಇವೆರಡೂ ಪ್ರಕರಣಗಳ ಹಿಂದೆ ಉಗ್ರರ ಕೈವಾಡ ಶಂಕೆಯ ಮೇಲೆ ಎನ್​ಐಎ ದಾಳಿ ನಡೆಸಿದೆ. ತಮಿಳುನಾಡಿನ ಕೊಡುಂಗಯ್ಯೂರು ಮತ್ತು ಕೇರಳದ ಮನ್ನಾಡಿ ಸೇರಿದಂತೆ ಮೂರು ರಾಜ್ಯಗಳ ಸುಮಾರು 45 ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಲಾಗಿತ್ತು. ಕಳೆದ ವರ್ಷ ಕೊಯಮತ್ತೂರು ಜಿಲ್ಲೆಯ ಕೊಟ್ಟೈ ಈಶ್ವರನ್ ದೇವಾಲಯದ ಮುಂಭಾಗದಲ್ಲಿ ಸ್ಫೋಟಕಗಳನ್ನು ತುಂಬಿದ ಕಾರಿನಲ್ಲಿ ಬಾಂಬ್ ಸ್ಫೋಟಿಸಿದ ಪ್ರಕರಣವನ್ನು ಎನ್‌ಐಎ ತನಿಖೆ ನಡೆಸುತ್ತಿದೆ. ಪ್ರಾಥಮಿಕ ತನಿಖೆಯಲ್ಲಿ 11 ಆರೋಪಿಗಳನ್ನು ಬಂಧಿಸಲಾಗಿತ್ತು.

ಅಸನೂರು, ಕಡಂಬೂರ್ ಪ್ರದೇಶಗಳಲ್ಲಿ ಕ್ರಿಮಿನಲ್ ಸಂಚು: ಮೃತ ಜಮೇಶಾ ಮುಬೀನ್ ಅಂತಾರಾಷ್ಟ್ರೀಯ ಉಗ್ರ ಸಂಘಟನೆಯಾದ ಐಸಿಸ್‌ನೊಂದಿಗೆ ಗುರುತಿಸಿಕೊಂಡಿದ್ದ. ಭಯೋತ್ಪಾದನೆ ಸೃಷ್ಟಿಸುವ ಸಲುವಾಗಿ ಆತ್ಮಾಹುತಿ ದಾಳಿ ನಡೆಸಲು ಮತ್ತು ದೇವಾಲಯದ ಸಂಕೀರ್ಣಕ್ಕೆ ವ್ಯಾಪಕ ಹಾನಿ ಉಂಟುಮಾಡಲು ಯೋಜಿಸಿದ್ದ ಎಂದು ಎನ್‌ಐಎ ಹೇಳಿಕೆಯಲ್ಲಿ ತಿಳಿಸಿತ್ತು. ಆರೋಪಿಗಳು ಈರೋಡ್ ಜಿಲ್ಲೆಯ ಸತ್ಯಮಂಗಲಂ ಅರಣ್ಯದ ಅಸನೂರು ಮತ್ತು ಕಡಂಬೂರ್ ಪ್ರದೇಶಗಳಲ್ಲಿ ಕ್ರಿಮಿನಲ್ ಸಂಚು ರೂಪಿಸಿದ್ದರು ಎಂಬುದು ತನಿಖೆಯಲ್ಲಿ ತಿಳಿದುಬಂದಿತ್ತು.

ಇದನ್ನೂ ಓದಿ :ಬಿಆರ್​ಎಸ್​ ಪಾರ್ಟಿ ಕಾರ್ಯಕ್ರಮದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ: 2 ಸಾವು, 8 ಮಂದಿಗೆ ಗಾಯ

ABOUT THE AUTHOR

...view details