ಲಖನೌ(ಉತ್ತರ ಪ್ರದೇಶ): ಕೇಂದ್ರ ಸರ್ಕಾರ ಈವರೆಗೆ ನೂತನ ಕೃಷಿ ಕಾಯ್ದೆಗಳು ಮತ್ತು ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ಕುರಿತು ಈವರೆಗೆ ತಮ್ಮ ಬೇಡಿಕೆಗೆ ಸಂಬಂಧಿಸಿದಂತೆ ಯಾವುದೇ ನಿರ್ಧಾರ ತೆಗೆದುಕೊಳ್ಳಲು ವಿಫಲವಾಗಿದೆ ಎಂದು ಆರೋಪಿಸಿ, ಆರ್ಎಸ್ಎಸ್ನ ಸಹ ಸಂಘಟನೆಯಾದ ಭಾರತೀಯ ಕಿಸಾನ್ ಸಂಘ (ಬಿಕೆಎಸ್) ದೇಶಾದ್ಯಂತ ಧರಣಿ ನಡೆಸಲು ನಿರ್ಧಾರ ಮಾಡಿದೆ.
ಕನಿಷ್ಠ ಬೆಂಬಲ ಬೆಲೆ ಬೆಳೆಯ ಬೆಲೆಯ ಮೇಲೆ ನಿರ್ಧಾರವಾಗಬೇಕು ಮತ್ತು ನೂತನ ಕೃಷಿ ಕಾಯ್ದೆಗಳಿಂದ ರೈತರಿಗೆ ಉಂಟಾಗುವ ಸಮಸ್ಯೆಗಳು ಮತ್ತು ವಿವಾದಗಳನ್ನು ಬಗೆಹರಿಸುವುದನ್ನು ಗಮನದಲ್ಲಿಟ್ಟುಕೊಂಡು ಹೊಸ ಕಾನೂನನ್ನು ಜಾರಿಗೊಳಿಸಬೇಕು ಎಂದು ಬಿಕೆಎಸ್ ಆಗ್ರಹಿಸಿದೆ.
ಮೋದಿ ಸರ್ಕಾರ ಆಗಸ್ಟ್ 31ರೊಳಗೆ ಕೃಷಿ ಕಾಯ್ದೆಗಳು ಮತ್ತು ಕನಿಷ್ಠ ಬೆಂಬಲ ಬೆಲೆ ಕುರಿತು ಸ್ಪಷ್ಟ ನಿರ್ಧಾರಕ್ಕೆ ಬರುವುದಾಗಿ ಭರವಸೆ ನೀಡಿತ್ತು. ಆದರೆ ಅಂತಹ ಸಕಾರಾತ್ಮಕ ಬೆಳವಣಿಗೆಗಳು ಸರ್ಕಾರದಿಂದ ಕಾಣುತ್ತಿಲ್ಲ. ಆದ್ದರಿಂದ ನಾವು ಸೆಪ್ಟೆಂಬರ್ 8ರಂದು ಧರಣಿ ಹಮ್ಮಿಕೊಳ್ಳುತ್ತಿದ್ದೇವೆ ಎಂದು ಬಿಕೆಎಸ್ನ ಖಜಾಂಚಿ ಯುಗಲ್ ಕಿಶೋರ್ ಮಿಶ್ರಾ ಸ್ಪಷ್ಟನೆ ನೀಡಿದ್ದಾರೆ.