ತಿರುವನಂತಪುರಂ(ಕೇರಳ):ಮಹಾಮಾರಿ ಕೊರೊನಾ ವೈರಸ್ ಹಾವಳಿ ಕಡಿಮೆಯಾಗಿರುವ ಕಾರಣ ಈಗಾಗಲೇ ಭಕ್ತರ ದರ್ಶನಕ್ಕಾಗಿ ಪ್ರಸಿದ್ಧ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲ ಓಪನ್ ಆಗಿದೆ. ಇಲ್ಲಿಗೆ ಭೇಟಿ ನೀಡುವ ಭಕ್ತರಿಗೆ ಆರ್ಟಿ-ಪಿಸಿಆರ್ ಹಾಗೂ ಕೋವಿಡ್ನ ಎರಡು ಡೋಸ್ ಲಸಿಕೆ ಪಡೆದಿರುವುದು ಕಡ್ಡಾಯಗೊಳಿಸಲಾಗಿದೆ. ಆದರೆ ಇದೀಗ ಮಕ್ಕಳಿಗೆ ವಿನಾಯಿತಿ ನೀಡಿ ಕೇರಳ ಸರ್ಕಾರ ಮಹತ್ವದ ನಿರ್ಧಾರ ಪ್ರಕಟಿಸಿದೆ.
ಶಬರಿಮಲೆಯಲ್ಲಿ ನವೆಂಬರ್ 16ರಿಂದ ವಾರ್ಷಿಕ ಜಾತ್ರೆ ಆರಂಭಗೊಂಡಿದ್ದು, ಪ್ರತಿದಿನ ಸಾವಿರಾರು ಭಕ್ತರು ಅಯ್ಯಪ್ಪ ಸ್ವಾಮಿ ದರ್ಶನ ಪಡೆದುಕೊಳ್ಳುತ್ತಿದ್ದಾರೆ. ಪೋಷಕರೊಂದಿಗೆ ಇಲ್ಲಿಗೆ ಬರುವ ಮಕ್ಕಳಿಗೆ ಇದೀಗ ಆರ್ಟಿ-ಪಿಸಿಆರ್ ಕಡ್ಡಾಯವಾಗಿಲ್ಲ ಎಂದು ಕೇರಳ ಸರ್ಕಾರ ತಿಳಿಸಿದೆ. ಆದರೆ ಮಕ್ಕಳು ಕಡ್ಡಾಯವಾಗಿ ಸೋಪ್, ಸ್ಯಾನಿಟೈಸ್ ಹಾಗೂ ಮಾಸ್ಕ್ ಧರಿಸುವುದು ಕಡ್ಡಾಯ ಎಂದಿದೆ.