ಆಂಧ್ರ ಪ್ರದೇಶ (ಪಶ್ಚಿಮ ಗೋದಾವರಿ) : ಆರ್‌ಟಿಸಿ ಬಸ್ ಸೇತುವೆಯಿಂದ ನದಿಗೆ ಉರುಳಿ ಬಿದ್ದ ಪರಿಣಾಮ 9 ಜನ ಪ್ರಯಾಣಿಕರು ಮೃತಪಟ್ಟಿರುವ ಘಟನೆ ಆಂಧ್ರದ ಗೋದಾವರಿ ಜಿಲ್ಲೆಯಲ್ಲಿ ಸಂಭವಿಸಿದೆ. ಜಂಗಾರೆಡ್ಡಿಗುಡೆಂ ವಲಯದ ಜಲ್ಲೇರು ಎಂಬಲ್ಲಿ ಬಸ್ ನದಿಗೆ ಉರುಳಿದ್ದು ಹಲವರು ಗಾಯಗೊಂಡಿದ್ದಾರೆ.
ಮೃತದೇಹಗಳನ್ನು ಹೊರತೆಗೆಯಲಾಗಿದ್ದು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದೆ. ಬಸ್ ವೇಲೇರುಪಾಡು ಕಡೆಯಿಂದ ಜಂಗಾರೆಡ್ಡಿಗುಡೆಂಗೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಮೇಲ್ನೋಟಕ್ಕೆ ಚಾಲಕನ ನಿಯಂತ್ರಣ ಕಳೆದುಕೊಂಡಿದ್ದರಿಂದ ಈ ದುರಂತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.