ಕರ್ನಾಟಕ

karnataka

ETV Bharat / bharat

ದೆಹಲಿಗೆ ಬಂದಿಳಿದ ರಷ್ಯಾ ವಿದೇಶಾಂಗ ಸಚಿವ ಸೆರ್ಗೆ ಲಾವ್ರೊವ್ - ದೆಹಲಿ ಪಾಲಂ ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಷ್ಯಾದ ವಿದೇಶಾಂಗ ಸಚಿವ

21ನೇ ವಾರ್ಷಿಕ ಭಾರತ-ರಷ್ಯಾ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಇಂದು ಸಂಜೆ ದೆಹಲಿಗೆ ಆಗಮಿಸಲಿದ್ದಾರೆ. ರಾಷ್ಟ್ರ ರಾಜಧಾನಿಯಲ್ಲಿ ನಿಗದಿಯಾಗಿರುವ ಮೊದಲ '2+2' ಸಂವಾದಕ್ಕೂ ಮುನ್ನ ರಷ್ಯಾ ವಿದೇಶಾಂಗ ಸಚಿವ ಸೆರ್ಗೆ ಲಾವ್ರೊವ್ ಭಾನುವಾರ ಭಾರತಕ್ಕೆ ಆಗಮಿಸಿದರು.

Sergey Lavrov arrives at Delhi Palam airport
ದೆಹಲಿ ಏರ್​​ಪೋರ್ಟ್​ಗೆ ಆಗಮಿಸಿದ ರಷ್ಯಾದ ವಿದೇಶಾಂಗ ಸಚಿವ ಸೆರ್ಗೆ ಲಾವ್ರೊವ್

By

Published : Dec 6, 2021, 9:01 AM IST

ನವದೆಹಲಿ: ರಷ್ಯಾ ವಿದೇಶಾಂಗ ಸಚಿವ ಸೆರ್ಗೆ ಲಾವ್ರೊವ್ ಅವರು ಕಳೆದ ರಾತ್ರಿ ದೆಹಲಿಯ ಪಾಲಂ ವಿಮಾನ ನಿಲ್ದಾಣದಲ್ಲಿ ಬಂದಿಳಿದರು.

ಲಾವ್ರೊವ್ ಅವರು ವಿದೇಶಾಂಗ ವ್ಯವಹಾರಗಳ ಸಚಿವ ಡಾ.ಎಸ್.ಜೈಶಂಕರ್ ಅವರನ್ನು ಭೇಟಿ ಮಾಡಲಿದ್ದಾರೆ. ಬಳಿಕ, ಉಭಯ ದೇಶಗಳ ನಡುವಿನ 2+2 ಸಚಿವರ ಸಂವಾದದಲ್ಲಿ ಭಾಗವಹಿಸುವರು.

21ನೇ ವಾರ್ಷಿಕ ಭಾರತ-ರಷ್ಯಾ ಶೃಂಗಸಭೆಯಲ್ಲಿ ಭಾಗಿಯಾಗಲು ವ್ಲಾಡಿಮಿರ್ ಪುಟಿನ್ ಇಂದು ಸಂಜೆ (ಸೋಮವಾರ) ದೆಹಲಿಗೆ ಆಗಮಿಸುವರು. ಉಭಯ ದೇಶಗಳ ನಾಯಕರು ಪ್ರಮುಖ ದ್ವಿಪಕ್ಷೀಯ, ಪ್ರಾದೇಶಿಕ ಮತ್ತು ಅಂತಾರಾಷ್ಟ್ರೀಯ ವಿಷಯಗಳ ಕುರಿತು ಚರ್ಚಿಸಲಿದ್ದಾರೆ. 2019ರ ಶೃಂಗಸಭೆ ನಂತರ ಪುಟಿನ್ ಮತ್ತು ಪ್ರಧಾನಿ ನರೇಂದ್ರ ಮೋದಿ ನಡುವಿನ ಮೊದಲ ಭೇಟಿ ಇದಾಗಿದೆ.

ಇದನ್ನೂ ಓದಿ:ಅಧ್ಯಕ್ಷ ಪುಟಿನ್ ಭೇಟಿಗೂ ಮುನ್ನ ಭಾರತಕ್ಕೆ ಆಗಮಿಸಲಿರುವ ರಷ್ಯಾ ವಿದೇಶಾಂಗ ಸಚಿವ

ABOUT THE AUTHOR

...view details