ನವದೆಹಲಿ:ರಷ್ಯಾಧ್ಯಕ್ಷ ವ್ಲಾಡಿಮಿರ್ ಪುಟಿನ್ ಡಿಸೆಂಬರ್ ಮೊದಲ ವಾರದಲ್ಲಿ ಭಾರತಕ್ಕೆ ಭೇಟಿ ನೀಡಲಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಭಾರತೀಯ ವಿದೇಶಾಂಗ ಸಚಿವಾಲಯ ಮಾಹಿತಿ ನೀಡಿದ್ದು, ಡಿಸೆಂಬರ್ 6ರಂದು ಅವರು ಆಗಮಿಸಲಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿ ಮಾತನಾಡಿರುವ ವಿದೇಶಾಂಗ ಇಲಾಖೆ ವಕ್ತಾರ ಅರಿಂದಮ್ ಬಾಗ್ಚಿ, ಉಭಯ ದೇಶಗಳ ನಡುವಿನ 21ನೇ ವಾರ್ಷಿಕ ಶೃಂಗಸಭೆಯಲ್ಲಿ ಭಾಗಿಯಾಗಲು ಅವರು ಭಾರತಕ್ಕೆ ಬರುತ್ತಿದ್ದು, ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಉಭಯ ನಾಯಕರ ಭೇಟಿ ವೇಳೆ ಹಲವು ಒಪ್ಪಂದಗಳಿಗೆ ಸಹಿ ಹಾಕುವ ನಿರೀಕ್ಷೆಯಿದೆ. S400 ಏರ್ ಡಿಫೆನ್ಸ್ ಸಿಸ್ಟಮ್‌ನ ಮೊದಲ ಬ್ಯಾಚ್ ಈ ವರ್ಷದ ಅಂತ್ಯದ ವೇಳೆಗೆ ಭಾರತ ತಲುಪಲಿದ್ದು ಈ ಕುರಿತು ಶೃಂಗಸಭೆಯಲ್ಲಿ ಮಾತುಕತೆ ನಡೆಯಲಿದೆ.