ಮುಂಬೈ: ಡ್ರಗ್ಸ್ ಪಾರ್ಟಿಯಲ್ಲಿ ಭಾಗಿಯಾದ ಆರೋಪದಲ್ಲಿ ಬಂಧನವಾಗಿರುವ ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್ರನ್ನು ಅಕ್ಟೋಬರ್ 7ರ ವರೆಗೆ ಎನ್ಸಿಬಿ ವಶಕ್ಕೆ ನೀಡಿ ಈ ಹಿಂದೆ ಆದೇಶ ಹೊರಡಿಸಿದ್ದ ಮುಂಬೈ ಮ್ಯಾಜಿಸ್ಟ್ರೇಟ್ ಕೋರ್ಟ್ ಇಂದು ಮಹತ್ವದ ನಿರ್ಧಾರ ಹೊರಡಿಸಿದೆ.
ಶಾರೂಖ್ ಖಾನ್ ಪುತ್ರ ಆರ್ಯನ್ ಸೇರಿದಂತೆ ಇತರೆ 7 ಮಂದಿಗೆ ಮುಂದಿನ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ, ಆದೇಶ ಹೊರಹಾಕಿದೆ. ಕ್ರೂಸ್ ಹಡಗಿನಲ್ಲಿ ಡ್ರಗ್ಸ್ ಪಾರ್ಟಿಯಲ್ಲಿ ಭಾಗಿಯಾದ ಆರೋಪದಲ್ಲಿ ಬಂಧನವಾಗಿದ್ದು, ಇದೀಗ ಎನ್ಸಿಬಿ ಮತ್ತಷ್ಟು ಮಾಹಿತಿ ಕಲೆಹಾಕಲಿದೆ.
ಇದನ್ನೂ ಓದಿರಿ:ರೈಲ್ವೆ ಪ್ಲಾಟ್ ಫಾರ್ಮ್, ರೈಲಿನಲ್ಲಿ ಸಂಚರಿಸುವಾಗ ಮಾಸ್ಕ್ ಕಡ್ಡಾಯ.. ಇಲ್ಲದಿದ್ದರೆ 500 ರೂ. ದಂಡ