ನವದೆಹಲಿ: ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಅವರು ಕತಾರ್ನ ವಿದೇಶಾಂಗ ಸಚಿವರಾದ ಶೇಖ್ ಮೊಹಮ್ಮದ್ ಬಿನ್ ಅಬ್ದುಲ್ ರಹಮಾನ್ ಅಲ್ ಥಾನಿಯೊಂದಿಗೆ ಅಫ್ಘಾನಿಸ್ತಾನದ ಪ್ರಸ್ತುತ ಬೆಳವಣಿಗೆಗಳ ಕುರಿತು ಶುಕ್ರವಾರ ಮಾತುಕತೆ ನಡೆಸಿದ್ದಾರೆ.
ಅಮೆರಿಕದಿಂದ ಭಾರತಕ್ಕೆ ಹಿಂದಿರುವ ವೇಳೆ ಕತಾರ್ಗೆ ತೆರಳಿದ್ದ ಅವರು ಕೆಲವೊಂದು ಅಂತಾರಾಷ್ಟ್ರೀಯ ವಿಚಾರಗಳ ಬಗ್ಗೆ ಮಾತುಕತೆ ನಡೆಸಿದ್ದಾರೆ. ಸದ್ಯಕ್ಕೆ ಕತಾರ್ ಆಫ್ಘನ್ ಶಾಂತಿ ಮಾತುಕತೆಗೆ ವೇದಿಕೆಯಾಗಿದ್ದು, ಅತ್ಯಂತ ಪ್ರಮುಖ ದೇಶವಾಗಿ ಹೊರಹೊಮ್ಮಿದೆ.
ಕತಾರ್ ಭೇಟಿಯ ಬಗ್ಗೆ ಟ್ವೀಟ್ ಮಾಡಿರುವ ಕೇಂದ್ರ ಸಚಿವ ಎಸ್.ಜೈಶಂಕರ್ ಕತಾರ್ನ ವಿದೇಶಾಂಗ ಸಚಿವ ಶೇಖ್ ಮೊಹಮ್ಮದ್ ಬಿನ್ ಅಬ್ದುಲ್ ರಹಮಾನ್ ಅಲ್ ಥಾನಿ ಅವರನ್ನು ಭೇಟಿಯಾಗಿದ್ದೇನೆ. ಅಫ್ಘಾನಿಸ್ತಾನದ ಬಗ್ಗೆ ಅತ್ಯಂತ ಉಪಯುಕ್ತ ಮಾಹಿತಿ ಹಂಚಿಕೊಂಡಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.
ಈ ತಿಂಗಳ ಆರಂಭದಲ್ಲಿ, ಕತಾರ್ನ ವಿಶೇಷ ಪ್ರತಿನಿಧಿ ಮುತ್ಲಾಕ್ ಬಿನ್ ಮಜೀದ್ ಅಲ್-ಕಹ್ತಾನಿ ಭಾರತಕ್ಕೆ ಭೇಟಿ ನೀಡಿದ್ದು, ಹಲವಾರು ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದರು.
ಇದನ್ನೂ ಓದಿ:ಸಿಆರ್ಪಿಎಫ್ ಬಂಕರ್ ಮೇಲೆ ದಾಳಿಗೆ ಉಗ್ರರ ಯತ್ನ: ಅದೃಷ್ಟವಶಾತ್ ಸಿಡಿಯದ ಗ್ರೆನೇಡ್