ಕೇರಳ :ದೇಶದಲ್ಲಿ ಒಮಿಕ್ರಾನ್ ವೈರಸ್ ವ್ಯಾಪಿಸುವ ಭೀತಿ ಮಧ್ಯೆಯೇ ಶಬರಿಮಲೆಗೆ ಭಕ್ತರ ದಂಡೇ ಆಗಮಿಸುತ್ತಿದೆ. ಶನಿವಾರ ದಾಖಲೆಯ 42 ಸಾವಿರ ಜನರು ಶಬರಿಮಲೆ ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದಿದ್ದಾರೆ ಎಂದು ಕೇರಳ ಸರ್ಕಾರ ಮಾಹಿತಿ ನೀಡಿದೆ.
ಮಂಡಲ ಮಹಾವಿರಕ್ಕು ಹಿನ್ನೆಲೆಯಲ್ಲಿ ದೇವಸ್ಥಾನವನ್ನು ಭಕ್ತರಿಗಾಗಿ ತೆರೆಯಲಾಗಿದೆ. ಶುಕ್ರವಾರದಂದು 27 ಸಾವಿರಕ್ಕೂ ಅಧಿಕ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿದ್ದರೆ, ಶನಿವಾರ ದಾಖಲೆಯ 42 ಸಾವಿರ ಮಂದಿ ಸ್ವಾಮಿಯ ದರ್ಶನಕ್ಕೆ ಬಂದಿದ್ದಾರೆ. ದೇವಸ್ಥಾನ ಪ್ರವೇಶಿಸುವ ಎಲ್ಲಾ ಭಕ್ತಾದಿಗಳಿಗೆ ಮಾಸ್ಕ್, ಸ್ಯಾನಿಟೈಸರ್ ನೀಡಲಾಗುತ್ತಿದೆ ಎಂದು ಸರ್ಕಾರ ತಿಳಿಸಿದೆ.