ಜೈಪುರ:ಕಾಂಗ್ರೆಸ್ ಮುಖಂಡ ಸಚಿನ್ ಪೈಲಟ್ ಸದ್ಯದಲ್ಲೇ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದಿದ್ದ ಬಿಜೆಪಿ ಸಂಸದೆ ರೀಟಾ ಬಹುಗುಣ ಜೋಶಿ ಹೇಳಿಕೆಗೆ ಪೈಲಟ್ ಪ್ರತಿಕ್ರಿಯಿಸಿದ್ದಾರೆ. ಸಚಿನ್ ಪೈಲಟ್ ಕಾಂಗ್ರೆಸ್ ಪಕ್ಷದ ಬಗ್ಗೆ ಅಸಮಾಧಾನ ಹೊರಹಾಕಿದ ಬಳಿಕ ಈ ಪ್ರತಿಕ್ರಿಯೆ ಹೊರಬಿದ್ದಿದೆ. ಕಳೆದ ಒಂದು ವಾರದಿಂದ ಆಡಳಿತಾರೂಢ ರಾಜಸ್ಥಾನ್ ಕಾಂಗ್ರೆಸ್ ಪಕ್ಷದೊಳಗೆ ಅಸಮಾಧಾನ ಭುಗಿಲೆದ್ದಿದೆ. ಸಚಿನ್ ಪೈಲಟ್ ಬಗ್ಗೆ ತೀವ್ರ ಚರ್ಚೆಗಳಾಗುತ್ತಿವೆ. ಒಂದು ವರ್ಷದ ನಂತರ ರಾಜಸ್ಥಾನದ ಆಡಳಿತ ಪಕ್ಷದಲ್ಲಿ ಭಿನ್ನಾಭಿಪ್ರಾಯವು ಪುನರುಜ್ಜೀವನಗೊಳ್ಳುತ್ತಿದೆ ಎಂಬ ಊಹಾಪೋಹಗಳು ಹರಿದಾಡುತ್ತಿವೆ.
ಸಂಸದೆ ರೀಟಾ ನನ್ನ ಜತೆ ಅಲ್ಲ ತೆಂಡೂಲ್ಕರ್ ಜತೆ ಮಾತನಾಡಿರಬೇಕು: ಸಚಿನ್ ಪೈಲಟ್ ಸಿಡಿಮಿಡಿ
ಕಾಂಗ್ರೆಸ್ ಮುಖಂಡ ಸಚಿನ್ ಪೈಲಟ್ ಬಿಜೆಪಿ ಸೇರಲಿದ್ದಾರೆ ಎಂದು ಹೇಳಿದ್ದ ಬಿಜೆಪಿ ಸಂಸದೆ ರೀಟಾ ಬಹುಗುಣ ಜೋಶಿ ವಿರುದ್ಧ ಹರಿಹಾಯ್ದಿರುವ ಸಚಿನ್ ಪೈಲಟ್, ರೀಟಾ ಬಹುಗುಣ ಅವರು ಸಚಿನ್ ತೆಂಡೂಲ್ಕರ್ ಅವರೊಂದಿಗೆ ಮಾತನಾಡಿರಬೇಕು ನನ್ನ ಜೊತೆ ಅಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ಸಚಿನ್ ಕಾಂಗ್ರೆಸ್ ಸೇರಲಿದ್ದಾರೆ ಎಂಬ ಊಹಾಪೋಹಗಳನ್ನು ತಳ್ಳಿಹಾಕಿದ ಸಚಿನ್, ಬಿಜೆಪಿ ಸಂಸದೆ ರೀಟಾ ಬಹುಗುಣ ಜೋಶಿ ಅವರ ಹೇಳಿಕೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ರೀಟಾ ಬಹುಗುಣ ಅವರು ಸಚಿನ್ ತೆಂಡೂಲ್ಕರ್ ಅವರೊಂದಿಗೆ ಮಾತನಾಡಿದ್ದಿರಬೇಕು ನನ್ನ ಜೊತೆ ಅಲ್ಲ ಎಂದು ವಾಗ್ದಾಳಿ ನಡೆಸಿದ್ರು. ಅಲ್ಲದೇ ಸ್ವತಃ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರಿದ ರೀಟಾ ಜೋಶಿ ಈ ರೀತಿ ಮಾತನಾಡಬಾರದು ಎಂದು ಹೇಳಿದ್ರು. ರೀಟಾ ಸುಮಾರು 25 ವರ್ಷಗಳ ಕಾಲ ಕಾಂಗ್ರೆಸ್ ಪಕ್ಷದಲ್ಲಿದ್ದು, ನಂತರ ಬಿಜೆಪಿಗೆ ಸೇರಿದ್ದರು.
2022 ರಲ್ಲಿ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಮುನ್ನ ಹಲವಾರು ಪ್ರಮುಖ ರಾಜಕೀಯ ವಿದ್ಯಮಾನಗಳು ನಡೆಯುತ್ತಿದ್ದು, ಯುಪಿ ಚುನಾವಣೆಗೆ ಈಗಾಗಲೇ ರಾಜಕೀಯ ಪಕ್ಷಗಳು ಸಜ್ಜಾಗುತ್ತಿವೆ. ಅನೇಕ ನಾಯಕರು ಅದಾಗಲೇ ಕಾಂಗ್ರೆಸ್ನಿಂದ ಹೊರಗೆ ಹೆಜ್ಜೆ ಇಡುತ್ತಿದ್ದಾರೆ. ಇತ್ತೀಚೆಗೆ ಕಾಂಗ್ರೆಸ್ ಮುಖಂಡ ಜಿತಿನ್ ಪ್ರಸಾದ್ ಸಹ ಬಿಜೆಪಿಗೆ ಸೇರಿದ್ದಾರೆ.