ನವದೆಹಲಿ:ಕ್ರಿಕೆಟ್ ದೇವರೆಂದೇ ಖ್ಯಾತಿಯಾದ ಸಚಿನ್ ತೆಂಡೂಲ್ಕರ್ ಅವರ ಪುತ್ರಿ ಸಾರಾ ತೆಂಡೂಲ್ಕರ್ ಮಾಡೆಲಿಂಗ್ ಕ್ಷೇತ್ರಕ್ಕೆ ಅಡಿಯಿಟ್ಟಿದ್ದಾರೆ. ತಮ್ಮ ಫ್ಯಾಷನ್ನಿಂದಲೇ ಅಭಿಮಾನಿಗಳ ಗಮನ ಸೆಳೆಯುತ್ತಿದ್ದ ಸಾರಾ ತೆಂಡೂಲ್ಕರ್ ಜನಪ್ರಿಯ ಉಡುಪಿನ ಬ್ರ್ಯಾಂಡ್ವೊಂದಕ್ಕೆ ಮಾಡೆಲ್ ಆಗಿ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದಾರೆ.
ಸಾರಾ ತೆಂಡೂಲ್ಕರ್ ಇತರ ಮಾಡೆಲ್ಗಳಾದ ಬನಿತಾ ಸಂಧು ಮತ್ತು ತಾನಿಯಾ ಶ್ರಾಫ್ ಅವರ ಜೊತೆಯಾಗಿ ಉಡುಪುಗಳ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದು, ಜಾಹೀರಾತಿನ ವಿಡಿಯೋವನ್ನು ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಹಾಕಿಕೊಂಡಿದ್ದಾರೆ. ಈ ಮೂಲಕ ಸಾರಾ ಮಾಡೆಲಿಂಗ್ ಲೋಕಕ್ಕೆ ಪದಾರ್ಪಣೆ ಮಾಡಿದ್ದಾರೆ.