ಮುಂಬೈ :ಉದ್ಯಮಿ ಮುಖೇಶ್ ಅಂಬಾನಿ ನಿವಾಸದ ಮುಂದೆ ಸ್ಫೋಟಕ ಪತ್ತೆ ಪ್ರಕರಣ ಮತ್ತು ಮನ್ಸುಖ್ ಹಿರೇನ್ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಅಮಾನತುಗೊಂಡು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ವಶದಲ್ಲಿರುವ ಮಾಜಿ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಅವರ ಕಸ್ಟಡಿ ಅವಧಿಯನ್ನು ಮತ್ತೆ ಎರಡು ದಿನಗಳವರೆಗೆ ವಿಸ್ತರಿಸಲಾಗಿದೆ.
ರಾಷ್ಟ್ರೀಯ ತನಿಖಾ ಸಂಸ್ಥೆಯ ನ್ಯಾಯಾಲಯ ಈ ಆದೇಶ ನೀಡಿದೆ. ಮುಂಬೈನ ಮುಖೇಶ್ ಅಂಬಾನಿಯ ನಿವಾಸ ಆ್ಯಂಟಿಲಿಯಾ ಹೊರಗೆ ಸ್ಫೋಟಕ ಇರಿಸಿದ್ದ ಆರೋಪದಲ್ಲಿ ವಿಚಾರಣೆಗಾಗಿ ಸಚಿನ್ ವಾಜೆಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.
ಇದನ್ನೂ ಓದಿ:ಬಹುಭಾಷಾ ನಟ ಶರತ್ಕುಮಾರ್ ದಂಪತಿಗೆ ಒಂದು ವರ್ಷ ಜೈಲು ಶಿಕ್ಷೆ: ಕಾರಣ?
ಸಚಿನ್ ವಾಜೆ ಮಾರ್ಚ್ 13 ರಂದು ಬಂಧಿತನಾಗಿದ್ದ. ಇದಕ್ಕೂ ಮೊದಲು ಹೆಚ್ಚಿನ ವಿಚಾರಣೆಗೆ ಎನ್ಐಎ ಅಧಿಕಾರಿಗಳು ಎನ್ಐಎ ಕೋರ್ಟ್ಗೆ ಮನವಿ ಮಾಡಿದ್ದರು. ಇದಕ್ಕೆ ಸ್ಪಂದಿಸಿದ ನ್ಯಾಯಾಲಯವು ಏಪ್ರಿಲ್ 7ರವರೆಗೆ ಆರೋಪಿಯನ್ನು ಎನ್ಐಎ ಕಸ್ಟಡಿಗೆ ನೀಡಿತ್ತು.
ಇಂದಿಗೆ ಎನ್ಐಎ ಅವಧಿ ಮುಕ್ತಾಯವಾಗಿರುವ ಹಿನ್ನೆಲೆ ಮತ್ತಷ್ಟು ವಿಚಾರಣೆಗಾಗಿ ಕೋರ್ಟ್ಗೆ ಮನವಿ ಮಾಡಲಾದ ಹಿನ್ನೆಲೆ ಎನ್ಐಎ ಅಧಿಕಾರಿಗಳ ಮನವಿಗೆ ಸ್ಪಂದಿಸಿದ ನ್ಯಾಯಾಲಯವು ಮತ್ತೆರಡು ದಿನಗಳ ಕಾಲ ಕಸ್ಟಡಿ ಅವಧಿ ವಿಸ್ತರಿಸಿದೆ.