ಕರ್ನಾಟಕ

karnataka

By

Published : Jun 25, 2021, 4:26 PM IST

ETV Bharat / bharat

ಕುಸ್ತಿಪಟು ಕೊಲೆ ಕೇಸ್ : ಸುಶೀಲ್‌ಕುಮಾರ್‌ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ಪ್ರಕರಣದಲ್ಲಿ ತಮ್ಮ ಹೆಸರು ಕೇಳಿ ಬರುತ್ತಿದ್ದಂತೆಯೇ ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಸುಶೀಲ್ ​ಕುಮಾರ್ ಪರಾರಿಯಾಗಿದ್ದರು. ಬಳಿಕ ಇವರನ್ನು ಬಂಧಿಸುವಲ್ಲಿ ದೆಹಲಿ ಪೊಲೀಸರು ಯಶಸ್ವಿಯಾಗಿದ್ದರು..

Sushil Kumar
Sushil Kumar

ನವದೆಹಲಿ :ಯುವ ಕುಸ್ತಿಪಟು ಸಾಗರ್​ ಧಂಕರ್​​ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಸುಶೀಲ್ ​ಕುಮಾರ್ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆಗೊಂಡಿದೆ. ಮುಂದಿನ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿ ದೆಹಲಿ ಕೋರ್ಟ್​​ ಮಹತ್ವದ ಆದೇಶ ನೀಡಿದೆ.

ಇಂದು ವಿಚಾರಣೆ ನಡೆಸಿರುವ ದೆಹಲಿ ಕೋರ್ಟ್​​ ಕುಸ್ತಿಪಟು ಸುಶೀಲ್​ ಕುಮಾರ್​ ಹಾಗೂ ಆತನ ಸಹಚರ ಅಜಯ್​ ಕುಮಾರ್​ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ ಮಾಡಿರುವ ಆದೇಶ ಹೊರ ಹಾಕಿದೆ. ಈ ಹಿಂದೆ ಜೂನ್​ 25ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿ ಆದೇಶ ಹೊರ ಹಾಕಿತ್ತು.

ಇದನ್ನೂ ಓದಿರಿ: ಪಂಜಾಬ್​ ಕಾಂಗ್ರೆಸ್‌ ಬಿಕ್ಕಟ್ಟು : ಮಾತುಕತೆ ಮುಂದುವರೆಸಿರುವ ರಾಹುಲ್ ಗಾಂಧಿ!

ಮೇ 4ರಂದು ದೆಹಲಿಯ ಛತ್ರಸಾಲ ಸ್ಟೇಡಿಯಂನಲ್ಲಿ ಎರಡು ಗುಂಪುಗಳ ನಡುವೆ ನಡೆದ ಗಲಾಟೆಯಲ್ಲಿ ಕುಸ್ತಿಪಟು ಸಾಗರ್ ರಾಣಾ ಧಂಕರ್ ಹಲ್ಲೆಗೊಳಗಾಗಿ ಮೃತಪಟ್ಟಿದ್ದರು. ಪ್ರಕರಣದಲ್ಲಿ ತಮ್ಮ ಹೆಸರು ಕೇಳಿ ಬರುತ್ತಿದ್ದಂತೆಯೇ ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಸುಶೀಲ್ ​ಕುಮಾರ್ ಪರಾರಿಯಾಗಿದ್ದರು. ಬಳಿಕ ಇವರನ್ನು ಬಂಧಿಸುವಲ್ಲಿ ದೆಹಲಿ ಪೊಲೀಸರು ಯಶಸ್ವಿಯಾಗಿದ್ದರು. ದೆಹಲಿ ನ್ಯಾಯಾಲಯವು ಸುಶೀಲ್‌​ಕುಮಾರ್, ಅವರ ಸ್ನೇಹಿತ ಅಜಯ್ ಕುಮಾರ್ ಸೇರಿದಂತೆ ಆರು ಮಂದಿ ಆರೋಪಿಗಳಿಗೆ ಜಾಮೀನು ರಹಿತ ವಾರಂಟ್ ಜಾರಿಗೊಳಿಸಿತ್ತು.

ABOUT THE AUTHOR

...view details