ಮುಂಬೈ (ಮಹಾರಾಷ್ಟ್ರ): ಅತ್ಯಾಚಾರ ಹಾಗೂ ಹಲ್ಲೆಗೊಳಗಾಗಿ ಮುಂಬೈನ ರಾಜವಾಡಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಮಹಿಳೆ ಇಂದು ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.
ಮುಂಬೈನ ಸಾಕಿನಾಕಾ ಪ್ರದೇಶದಲ್ಲಿ 30 ವರ್ಷದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದ ಕಾಮುಕ ಆಕೆಯ ಗುಪ್ತಾಂಗಕ್ಕೆ ರಾಡ್ ಹಾಕಿ, ತಲೆಗೆ ರಾಡ್ನಿಂದ ಹೊಡೆದು ವಿಕೃತಿ ಮೆರೆದಿದ್ದನು. ಶುಕ್ರವಾರ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಪೊಲೀಸರು ತೀವ್ರ ರಕ್ತಸ್ರಾವಕ್ಕೊಳಗಾಗಿದ್ದ ಮಹಿಳೆಯನ್ನು ರಾಜವಾಡಿ ಆಸ್ಪತ್ರೆಗೆ ದಾಖಲಿಸಿದ್ದರು.