ಕರ್ನಾಟಕ

karnataka

ETV Bharat / bharat

ಬೆಳ್ಳಂಬೆಳಗ್ಗೆ ಮನೆಗೆ ನುಗ್ಗಿ ವಿಕಲ ಚೇತನ ಯುವತಿ ಮೇಲೆ ಅತ್ಯಾಚಾರ, ಒಂದೇ ಕುಟುಂಬದ ಐವರನ್ನು ಕೊಲೆ ಮಾಡಿದ ಹಂತಕರು! - ಉತ್ತರಪ್ರದೇಶದಲ್ಲಿ ಬೆಳ್ಳಂಬೆಳಗ್ಗೆ ಕೊಲೆ

ದುಷ್ಕರ್ಮಿಗಳು ಬೆಳ್ಳಂಬೆಳಗ್ಗೆ ರಸ್ತೆ ಬದಿಯಲ್ಲಿರುವ ಮನೆಗೆ ನುಗ್ಗಿ ವಿಶೇಷಚೇತನ ಯುವತಿ ಮೇಲೆ ಅತ್ಯಾಚಾರ ನಡೆಸಿದಲ್ಲದೇ ಐವರನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಉತ್ತರಪ್ರದೇಶ ಪ್ರಯಾಗ್​ರಾಜ್​ನಲ್ಲಿ ನಡೆದಿದೆ..

CRIME IN PRAYAGRAJ  people murdered in prayagraj  people killed in Uttara Pradesh  ಪ್ರಯಾಗ್​ರಾಜ್​ನಲ್ಲಿ ಒಂದೇ ಕುಟುಂಬದವರ ಕೊಲೆ  ಉತ್ತರಪ್ರದೇಶದಲ್ಲಿ ಬೆಳ್ಳಂಬೆಳಗ್ಗೆ ಕೊಲೆ  ಪ್ರಯಾಗ್​ರಾಜ್​ ಅಪರಾಧ ಸುದ್ದಿ
ಪ್ರಯಾಗ್​ರಾಜ್​ ಕೊಲೆ

By

Published : Apr 23, 2022, 12:06 PM IST

ಪ್ರಯಾಗ್‌ರಾಜ್ :ರಸ್ತೆ ಬದಿಗೆ ಇದ್ದ ಮನೆಗೆ ಕೆಲ ದುಷ್ಕರ್ಮಿಗಳು ನುಗ್ಗಿ ಅವಾಂತರ ಸೃಷ್ಟಿಸಿದ್ದಾರೆ. ಹಂತಕರು ವಿಶೇಷಚೇತನ ಯುವತಿ ಮೇಲೆ ಅತ್ಯಾಚಾರ ಮಾಡಿದಲ್ಲದೇ ಇಡೀ ಕುಟುಂಬವನ್ನೇ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಥರವಾಯಿ ಪೊಲೀಸ್ ಠಾಣೆ ವ್ಯಾಪ್ತಿಯ ಖೇವರಾಜಪುರ ಗ್ರಾಮದಲ್ಲಿ ನಡೆದಿದೆ.

ಏನಿದು ಘಟನೆ? :ಥರವಾಯಿ ಪೊಲೀಸ್ ಠಾಣಾ ವ್ಯಾಪ್ತಿಯ ಗರಾಪುರದಿಂದ ಸಿಕಂದ್ರಕ್ಕೆ ಹೋಗುವ ರಸ್ತೆಯ ಬದಿಯಲ್ಲಿ ಕುಟುಂಬವೊಂದು ವಾಸಿಸುತ್ತಿತ್ತು. ಬೆಳ್ಳಂಬೆಳಗ್ಗೆ ಮನೆಗೆ ನುಗ್ಗಿದ ದುಷ್ಕರ್ಮಿಗಳು ಇಡೀ ಕುಟುಂಬವನ್ನೇ ಕೊಂದಿದ್ದಾರೆ. ನಿರ್ಭೀತ ಹಂತಕರು ಪತಿ, ಪತ್ನಿ, ದಿವ್ಯಾಂಗ ಮಗಳು, ಸೊಸೆ ಮತ್ತು ಅಮಾಯಕ ಮೊಮ್ಮಗಳ ಮೇಲೆ ಹಲ್ಲೆ ನಡೆಸಿ ಕೊಂದಿದ್ದಾರೆ.

ಓದಿ:ಹುಚ್ಚನಂತೆ ಓಡೋಡಿ ಬಂದು ಮಕ್ಕಳೆದುರೇ ತಾಯಿಯನ್ನು ಬರ್ಬರವಾಗಿ ಕೊಂದ ಕೊಲೆಗಾರ!

ಮನೆಗೆ ಬೆಂಕಿಯಿಟ್ಟ ಹಂತಕರು :ಹತ್ಯೆಯ ನಂತರ ದುಷ್ಕರ್ಮಿಗಳು ಮನೆಗೆ ಬೆಂಕಿ ಹಚ್ಚಿದ್ದಾರೆ. ಈ ವೇಳೆ ಬೆಳಗ್ಗೆ ಮನೆಯಿಂದ ಹೊಗೆ ಬರುತ್ತಿರುವುದನ್ನು ಕಂಡ ದಾರಿಹೋಕರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಈ ವೇಳೆ ಎಲ್ಲರೂ ಕೊಲೆಯಾಗಿರುವುದು ಬೆಳಕಿಗೆ ಬಂದಿದೆ. ಕೂಡಲೇ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ಕೈಗೊಂಡರು.

ಅತ್ಯಾಚಾರ :ಮೃತರಲ್ಲಿವೊಬ್ಬರು ವಿಕಲಚೇತನ ಮಹಿಳೆಯೂ ಸೇರಿದ್ದಾರೆ. ಪೊಲೀಸರು ಸ್ಥಳಕ್ಕೆ ತಲುಪಿದಾಗ ಆಕೆಯ ಬಟ್ಟೆ ಅಸ್ತವ್ಯಸ್ತವಾಗಿತ್ತು. ಕೊಲೆಯಾಗುವ ಮೊದಲು ಆಕೆಯ ಮೇಲೆ ಅತ್ಯಾಚಾರ ನಡೆದಿರುವ ಬಗ್ಗೆ ಪೊಲೀಸರಿಂದ ಶಂಕೆ ವ್ಯಕ್ತವಾಗಿದೆ. ಮೃತ ದೇಹಗಳನ್ನು ವಶಕ್ಕೆ ಪಡೆದ ಪೊಲೀಸರು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.

ಓದಿ:ಮಕ್ಕಳ ಮೇಲೆ ವಾಮಾಚಾರದ ಶಂಕೆ.. ಊಟ ಮಾಡುತ್ತಿದ್ದ ಚಿಕ್ಕಪ್ಪ-ಚಿಕ್ಕಮ್ಮಳನ್ನು ಕೊಚ್ಚಿ ಕೊಲೆ ಮಾಡಿದ ಮಗ!

ತನಿಖೆ ಆರಂಭ :ಈ ಘಟನೆ ಕುರಿತು ಥರವಾಯಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳ ಪತ್ತೆಗೆ ಪೊಲೀಸರು ಶೋಧ ಕಾರ್ಯಾಚರಣೆ ಕೈಗೊಂಡಿದ್ದಾರೆ. ಆದಷ್ಟು ಬೇಗ ಆರೋಪಿಗಳನ್ನು ಸೆರೆ ಹಿಡಿಯುವುದಾಗಿ ಪೊಲೀಸರು ಹೇಳಿದ್ದಾರೆ.

ABOUT THE AUTHOR

...view details