ಮಹಾರಾಷ್ಟ/ಯವತ್ಮಾಲ್: 12 ಜನ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಬದಲು ಸ್ಯಾನಿಟೈಸರ್ ಹಾಕಲಾಗಿದ್ದು, ಪರಿಣಾಮ ಮಕ್ಕಳು ಅಸ್ವಸ್ಥಗೊಂಡ ಘಟನೆ ಮಹಾರಾಷ್ಟ್ರದ ಕಪಸಿ ಕೋಪರಿಯದ ಘತಾಂಜಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದಿದೆ.
ಪೋಲಿಯೋ ಲಸಿಕೆ ಬದಲು ಸ್ಯಾನಿಟೈಸರ್ : 12 ಮಕ್ಕಳು ಆಸ್ಪತ್ರೆಗೆ ದಾಖಲು
ಮಹಾರಾಷ್ಟದ ಕಪಸಿ ಕೋಪರಿಯದ ಘತಾಂಜಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪೋಲಿಯೋ ಲಸಿಕೆ ಹಾಕುವ ಬದಲು 12 ಜನ ಮಕ್ಕಳಿಗೆ ಸ್ಯಾನಿಟೈಸರ್ ಹಾಕಲಾಗಿದೆ.
12 ಮಕ್ಕಳು ಆಸ್ಪತ್ರೆಗೆ ದಾಖಲು
ಆರಂಭದಲ್ಲಿ ಮಕ್ಕಳು ವಾಂತಿ ಮಾಡಲು ಪ್ರಾರಂಭಿಸಿದ್ದು, ನಂತರ ಅವರನ್ನು ಯವತ್ಮಾಲ್ ಜಿಲ್ಲಾ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಇನ್ನು ವಿಷಯ ತಿಳಿದು ಕಲೆಕ್ಟರ್ ಎಂ.ದೇವೇಂದರ್ ಸಿಂಗ್ ಅವರು ಆಸ್ಪತ್ರೆಗೆ ಭೇಟಿ ನೀಡಿ, ಮಕ್ಕಳ ಸ್ಥಿತಿಗತಿ ವಿಚಾರಿಸಿದ್ದು, ಘಟನೆ ಕುರಿತು ಸೂಕ್ತ ತನಿಖೆ ನಡೆಸುವಂತೆ ಜಿಲ್ಲಾ ಪರಿಷತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಕೃಷ್ಣ ಪಂಚಲ್‌ಗೆ ಅವರಿಗೆ ನಿರ್ದೇಶನ ನೀಡಿದ್ದಾರೆ.