ಮುಂಬೈ:ರಾಜ್ಯಪಾಲರು ಮತ್ತು ಬಿಜೆಪಿ ಸೇರಿ ಸಂವಿಧಾನ ಉಲ್ಲಂಘನೆ ಮಾಡುತ್ತಿದ್ದಾರೆ ಎಂದು ಶಿವಸೇನಾ ನಾಯಕ ಸಂಜಯ್ ರಾವುತ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಿವಸೇನಾ ಶಾಸಕರ ಬಂಡಾಯದ ಹಿನ್ನೆಲೆಯಲ್ಲಿ ನಾಳೆ ಸದನದಲ್ಲಿ ಸರ್ಕಾರದ ಬಹುಮತ ಸಾಬೀತು ಮಾಡುವಂತೆ ರಾಜ್ಯಪಾಲರು ಸಿಎಂ ಉದ್ದವ್ ಠಾಕ್ರೆಗೆ ಪತ್ರ ಬರೆದಿದ್ದಾರೆ.
ಈ ಹಿನ್ನೆಲೆಯಲ್ಲಿ ಮಾತನಾಡಿರುವ ಶಿವಸೇನಾ ವಕ್ತಾರರೂ ಆಗಿರುವ ಸಂಜಯ್ ರಾವತ್, ನಾವು ರಾಜ್ಯಪಾಲರ ಆದೇಶದ ವಿರುದ್ಧ ಕೋರ್ಟ್‌ಗೆ ಹೋಗುತ್ತೇವೆ, ನ್ಯಾಯಕ್ಕಾಗಿ ಒತ್ತಾಯಿಸುತ್ತೇವೆ ಎಂದು ಹೇಳಿದ್ದಾರೆ. ಸುಪ್ರೀಂ ಕೋರ್ಟ್ ಮೇಲೆ ನಮಗೆ ನಂಬಿಕೆ ಇದೆ. ರಾಜ್ಯಪಾಲರು ರಫೇಲ್ ವೇಗಕ್ಕಿಂತಲೂ ಹೆಚ್ಚಿನ ಸ್ಪೀಡ್ನಲ್ಲಿ ನಿರ್ಧಾರ ಕೈಗೊಂಡಿದ್ದಾರೆ ಎಂದು ರಾವುತ್ ಆರೋಪಿಸಿದ್ದಾರೆ
ರಾಜ್ಯಪಾಲರ ನಿರ್ಧಾರ ವಿರೋಧಿಸಿದ ಕಾಂಗ್ರೆಸ್:ಸಿಎಂಗೆ ರಾಜ್ಯಪಾಲರು ಬರೆದ ಪತ್ರದ ಕುರಿತುಹಿರಿಯ ಕಾಂಗ್ರೆಸ್ ನಾಯಕ ಪೃಥ್ವಿರಾಜ್ ಚವಾಣ್ ಮಾತನಾಡಿದ್ದು, ರಾಜ್ಯಪಾಲರ ಆದೇಶದಂತೆ ನಾಳೆ ವಿಶ್ವಾಸಮತ ಯಾಚನೆ ನಡೆಯಲಿದೆ. ಆದರೆ, ಇದರ ವಿರುದ್ಧ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಿದೆ ಎಂದು ಹೇಳಿದ್ದಾರೆ.