ನವದೆಹಲಿ :ಜಿ-20 ಶೃಂಗಸಭೆ ಮತ್ತು 26ನೇ ಕಾನ್ಫರೆನ್ಸ್ ಆಫ್ ಪಾರ್ಟೀಸ್(CoP)ನಲ್ಲಿ ಭಾಗಿಯಾಗಲು ಪ್ರಧಾನಿ ಮೋದಿ ವಿಶೇಷ ವಿಮಾನದ ಮೂಲಕ ಇಟಲಿಗೆ ತೆರಳಿದ್ದಾರೆ.
ಇಟಲಿ ಪ್ರಧಾನಿ ಮಾರಿಯೋ ಡ್ರಾಘಿ ಅವರ ಆಹ್ವಾನದ ಮೇರೆಗೆ ರೋಮ್‌ನಲ್ಲಿ ನಡೆಯಲಿರುವ 16ನೇ ಜಿ-20 ರಾಷ್ಟ್ರಗಳ ನಾಯಕರ ಶೃಂಗಸಭೆಯಲ್ಲಿ ಪ್ರಧಾನಿ ಪಾಲ್ಗೊಳ್ಳಲಿದ್ದಾರೆ. ಈ ವೇಳೆ ಅವರು ರೋಮ್‌ನಲ್ಲಿರುವ ವ್ಯಾಟಿಕನ್ ಸಿಟಿಯಲ್ಲಿ ಪೋಪ್ ಫ್ರಾನ್ಸಿಸ್ ಅವರನ್ನು ಭೇಟಿ ಮಾಡಲಿದ್ದಾರೆ.