ಚೆನ್ನೈ (ತಮಿಳು ನಾಡು):ಅಕ್ರಮ ಆಸ್ತಿ ಗಳಿಕೆ ಪ್ರಕರಣದಡಿ ಬೆಂಗಳೂರಿನಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಹಾಗೂ ಪ್ರಸ್ತುತ ಕೊರೊನಾ ವೈರಸ್ಗೆ ಚಿಕಿತ್ಸೆ ಪಡೆಯುತ್ತಿರುವ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಆಪ್ತೆ ಶಶಿಕಲಾ ಬುಧವಾರ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ ಎಂದು ಅವರ ಸೋದರಳಿಯ ದಿನಕರನ್ ಹೇಳಿದ್ದಾರೆ.
ಇನ್ನೆರಡು ದಿನಗಳಲ್ಲಿ ಶಶಿಕಲಾ ಜೈಲಿನಿಂದ ಬಿಡುಗಡೆ; ಸೋದರಳಿಯ ದಿನಕರನ್ ಹೇಳಿಕೆ - ಶಶಿಕಲಾ
ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಹಾಗೂ ಪ್ರಸ್ತುತ ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಮಿಳುನಾಡಿನ ಶಶಿಕಲಾ ಇದೇ ತಿಂಗಳು 27ರಂದು ಜೈಲಿನಿಂದ ಬಿಡುಗಡೆಯಾಗಲಿದ್ದು, ನಮ್ಮ ನಿರೀಕ್ಷೆಯಂತೆ ಚಿನ್ನಮ್ಮ ನಾಡಿದ್ದು ಜೈಲಿನಿಂದ ಬಿಡುಗಡೆಯಾಗಲಿದ್ದಾರೆ ಎಂದು ಆಕೆಯ ಸೋದರಳಿಯ ದಿನಕರನ್ ಸಂತಸ ವ್ಯಕ್ತಪಡಿಸಿದ್ದಾರೆ.
ಕೊರೊನಾ ವೈರಸ್ನಿಂದಾಗಿ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ಚಿನ್ನಮ್ಮ (ಶಶಿಕಲಾ) ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ ಎಂದು ವೈದ್ಯರು ತಿಳಿಸಿದ್ದಾರೆ. ಅದಲ್ಲದೆ, ನಮ್ಮೆಲ್ಲರ ನಿರೀಕ್ಷೆಗಳಂತೆ ಚಿನ್ನಮ್ಮ ನಾಡಿದ್ದು ಅಂದರೆ 27 ರಂದು ಜೈಲಿನಿಂದ ಬಿಡುಗಡೆಯಾಗಲಿದ್ದಾರೆ ಎಂದು ದಿನಕರನ್ ಸಂತಸ ವ್ಯಕ್ತಪಡಿಸಿದ್ದಾರೆ.
66 ಕೋಟಿ ರೂ.ಗಳ ಅಕ್ರಮ ಆಸ್ತಿ ಪ್ರಕರಣದಲ್ಲಿ ಶಶಿಕಲಾಗೆ 2017ರ ಫೆಬ್ರವರಿಯಲ್ಲಿ ನಾಲ್ಕು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿತ್ತು. ಇದೇ ಜನವರಿ 20 ರಂದು ಶಶಿಕಲಾ ಕೊರೊನಾ ವೈರಸ್ಗೆ ತುತ್ತಾಗಿದ್ದರಿಂದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.