ಬೆಂಗಳೂರು:ಕೊರೊನಾ ವೈರಸ್ನಿಂದಾಗಿ ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವ ಶಶಿಕಲಾ ಆರೋಗ್ಯ ಸ್ಥಿರವಾಗಿದೆ ಎಂದು ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದೆ.
ಓದಿ: ಮೇ ತಿಂಗಳಲ್ಲಿ 'ಕಾಂಗ್ರೆಸ್' ಅಧ್ಯಕ್ಷ ಆಯ್ಕೆ... ನೇಮಿಸುವ ಪ್ರಕ್ರಿಯೆ ಹೇಗೆ!?

66 ವರ್ಷದ ಶಶಿಕಲಾ ನಟರಾಜನ್ ಇದೀಗ ಚೇತರಿಸಿಕೊಳ್ಳುತ್ತಿದ್ದು, ರಕ್ತದೊತ್ತಡ ಸಮಸ್ಯೆ ಹತೋಟಿಗೆ ಬಂದಿದೆ ಎಂದು ತಿಳಿಸಿದ್ದಾರೆ. ಶಶಿಕಲಾ ಅವರ ಆರೋಗ್ಯ ತೀವ್ರವಾಗಿ ಹದಗೆಟ್ಟಿದ್ದು, ಹೆಚ್ಚಿನ ಚಿಕಿತ್ಸೆಗೋಸ್ಕರ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗುತ್ತದೆ ಎಂಬ ಮಾತು ಗಂಭೀರವಾಗಿ ಕೇಳಿ ಬಂದಿದ್ದವು. ಆದರೆ ಬೇರೆ ಆಸ್ಪತ್ರೆಗೆ ಸ್ಥಳಾಂತರ ಮಾಡುವುದಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಅವರ ನಾಡಿ ಮಿಡಿತ ನಿಮಿಷಕ್ಕೆ 77 ಮತ್ತು ರಕ್ತದೊತ್ತಡ 149/64 ಇದೆ ಎಂದು ವೈದ್ಯಕೀಯ ಕಾಲೇಜು ತಿಳಿಸಿದ್ದು, ತೀವ್ರ ನಿಗಾ ಘಟಕದ ವಾರ್ಡ್ನಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ತಿಳಿಸಿದೆ. 66 ವರ್ಷದ ಶಶಿಕಲಾ ಮಾಜಿ ಮುಖ್ಯಮಂತ್ರಿ ದಿವಂಗತ ಜಯಲಲಿತಾ ಅವರ ಆಪ್ತರಾಗಿದ್ದು, ಅಸ್ತಿ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿದ್ದಾರೆ.