ಹೈದರಾಬಾದ್: ಭಾರತದ ಅತೀ ದೊಡ್ಡ ಸಾರ್ವಜನಿಕ ರಂಗದ ಬ್ಯಾಂಕ್ ಆಗಿರುವ ಎಸ್ಬಿಐ ತನ್ನ ಗ್ರಾಹಕರಿಗೆ ಪ್ಯಾನ್ ಕಾರ್ಡ್ ಅನ್ನು ಆಧಾರ್ನೊಂದಿಗೆ ಲಿಂಕ್ ಮಾಡಲು ಗಡುವು ನೀಡಿದೆ. ಬ್ಯಾಂಕ್ನ ಗ್ರಾಹಕರು ಜೂನ್ 30ರೊಳಗೆ ಆಧಾರ್ನೊಂದಿಗೆ ಲಿಂಕ್ ಮಾಡುವಂತೆ ತಿಳಿಸಿದೆ.
ಒಂದು ವೇಳೆ ಗ್ರಾಹಕರು ನಿಗದಿತ ಸಮಯದಲ್ಲಿ ಲಿಂಕ್ ಮಾಡದಿದ್ದರೆ. ಬ್ಯಾಂಕಿಂಗ್ ಸೇವೆಯಲ್ಲಿ ಸಮಸ್ಯೆ ಎದುರಿಸಬೇಕಾಗಬಹುದು ಎಂದಿದೆ. ಈ ಕುರಿತು ಟ್ವೀಟ್ ಮಾಡಿರುವ ಎಸ್ಬಿಐ ತಡೆ ರಹಿತ ಬ್ಯಾಂಕಿಂಗ್ ಸೇವೆ ಹಾಗೂ ಅನಾನುಕೂಲತೆಯಿಂದ ತಪ್ಪಿಸಿಕೊಳ್ಳಲು ಗ್ರಾಹಕರು ಆಧಾರ್ನೊಂದಿಗೆ ಪ್ಯಾನ್ ಕಾರ್ಡ್ ಲಿಂಕ್ ಮಾಡಿಕೊಳ್ಳಲು ಸಲಹೆ ನೀಡುತ್ತೇವೆ ಎಂದಿದೆ. ಅಲ್ಲದೇ ಪ್ಯಾನ್ ಅನ್ನು ಆಧಾರ್ನೊಂದಿಗೆ ಲಿಂಕ್ ಮಾಡುವುದು ಕಡ್ಡಾಯ ಎಂದು ತಿಳಿಸಿದೆ.