ನವದೆಹಲಿ:ಸುಮಾರು ಮೂರು ದಶಕಗಳ ಹಿಂದಿನ ಶೇ 50ರಷ್ಟು ಮೀಸಲಾತಿ ಪ್ರಮಾಣದ ಮಹತ್ವದ ತೀರ್ಪನ್ನು ಮರುಪರಿಶೀಲಿಸಲು ಒಪ್ಪಿಗೆ ನೀಡಿರುವ ಸುಪ್ರೀಂಕೋರ್ಟ್, ಈ ಬಗ್ಗೆ ಅಭಿಪ್ರಾಯ ಹಂಚಿಕೊಳ್ಳುವಂತೆ ಎಲ್ಲಾ ರಾಜ್ಯ ಸರ್ಕಾರ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ನೋಟಿಸ್ ನೀಡಿದೆ.
ಇಂದು ನ್ಯಾಯಮೂರ್ತಿ ಅಶೋಕ್ ಭೂಷಣ್ ನೇತೃತ್ವದ ನ್ಯಾಯಪೀಠವು ಮರಾಠ ಮೀಸಲಾತಿ ಪ್ರಕರಣ ಸಂಬಂಧ ಸಲ್ಲಿಕೆಯಾಗಿದ್ದ ಅರ್ಜಿಗಳ ವಿಚಾರಣೆ ನಡೆಸಿತು. ಅಸ್ತಿತ್ವದಲ್ಲಿರುವ ಶೇ 50 ಮೀಸಲಾತಿ ಕೋಟಾವನ್ನು ಏರಿಕೆ ಮಾಡಬೇಕೇ ಎಂದು ರಾಜ್ಯ ಸರ್ಕಾರಗಳಿಗೆ ಪ್ರಶ್ನಿಸಿದ್ದು, ಕೇಂದ್ರದ ಆರ್ಥಿಕವಾಗಿ ಹಿಂದುಳಿದ ವರ್ಗದವರಿಗೆ (ಒಬಿಸಿ) ನೀಡುವ ಮೀಸಲಾತಿ ಪ್ರಮಾಣದ ತಿದ್ದುಪಡಿಯ ಬಗ್ಗೆ ಅಭಿಪ್ರಾಯ ತಿಳಿಸಲು ಕೋರಿದೆ.