ನವದೆಹಲಿ: ಅಕ್ರಮ ಹಣ ವರ್ಗಾವಣೆ ಆರೋಪ ಎದುರಿಸುತ್ತಿರುವ ಕೇಂದ್ರದ ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ವಿದೇಶಕ್ಕೆ ಪ್ರಯಾಣ ಬೆಳಸಲು ಸುಪ್ರೀಂಕೋರ್ಟ್ ಅನುಮತಿ ನೀಡಿದೆ.
ಈ ಸಂಬಂಧ ಸಲ್ಲಿಕೆಯಾದ ಅರ್ಜಿ ವಿಚಾರಣೆ ನಡೆಸಿದ ಜಸ್ಟೀಸ್ ಅಶೋಕ್ ಭೂಷಣ್ ನೇತೃತ್ವದ ಪೀಠ, ವಿದೇಶಕ್ಕೆ ಪ್ರಯಾಣ ಬೆಳೆಸುವ ಸ್ಥಳ, ಎಲ್ಲಿ ವಾಸ ಮಾಡ್ತೀರಿ ಎಂಬ ಬಗ್ಗೆ ಮಾಹಿತಿ ನೀಡಬೇಕು ಹಾಗೂ ಈ ಸಂಬಂಧ 2 ಕೋಟಿ ರೂ. ಮುಂಗಡ ಪಾವತಿಸುವಂತೆ ಷರತ್ತು ವಿಧಿಸಿ, ವಿದೇಶಕ್ಕೆ ಪ್ರಯಾಣ ಬೆಳೆಸಲು ಅನುಮತಿ ನೀಡಿದೆ.