ಕರ್ನಾಟಕ

karnataka

ETV Bharat / bharat

ಬಳ್ಳಾರಿ ಎಂಟ್ರಿಗೆ ಅನುಮತಿ ಕೋರಿದ ಜನಾರ್ದನ ರೆಡ್ಡಿ: ಸುಪ್ರೀಂನಲ್ಲಿಂದು ವಿಚಾರಣೆ - reddy plea

ಮಗಳು ಮತ್ತು ಆಕೆಯ ನವಜಾತ ಶಿಶುವನ್ನು ಭೇಟಿ ಮಾಡುವ ಹಿನ್ನೆಲೆಯಲ್ಲಿ 1 ತಿಂಗಳಾದರೂ ಬಳ್ಳಾರಿ ಪ್ರವೇಶಕ್ಕೆ ಅನುಮತಿ ನೀಡುವಂತೆ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಸುಪ್ರೀಂ ಕೋರ್ಟ್​ಗೆ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಯಲಿದೆ.

SC asks CBI to report after enquiring on Reddy's plea
ಬಳ್ಳಾರಿ ಎಂಟ್ರಿಗೆ ಅನುಮತಿ ಕೋರಿದ ಜನಾರ್ದನ ರೆಡ್ಡಿ: ಸುಪ್ರೀಂನಲ್ಲಿಂದು ವಿಚಾರಣೆ

By

Published : Sep 30, 2022, 9:08 AM IST

ನವದೆಹಲಿ: ಕೋಟ್ಯಂತರ ರೂ. ಅಕ್ರಮ ಗಣಿಗಾರಿಕೆ ಪ್ರಕರಣದ ಆರೋಪಿ, ಮಾಜಿ ಸಚಿವ ಹಾಗೂ ಗಣಿ ಉದ್ಯಮಿ ಗಾಲಿ ಜನಾರ್ದನ ರೆಡ್ಡಿ ಅವರನ್ನು ವಿಚಾರಣೆ ನಡೆಸಿ ಇಂದು ವರದಿ ನೀಡುವಂತೆ ಸುಪ್ರೀಂ ಕೋರ್ಟ್ ಗುರುವಾರ ಸಿಬಿಐಗೆ ಸೂಚಿಸಿದೆ.

ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರ ಮಗಳು ಮೂರು ದಿನಗಳ ಹಿಂದಷ್ಟೇ ಮಗುವಿಗೆ ಜನ್ಮ ನೀಡಿರುವುದರಿಂದ ಪುತ್ರಿ ಮತ್ತು ಆಕೆಯ ನವಜಾತ ಶಿಶುವನ್ನು ಭೇಟಿ ಮಾಡುವ ಹಿನ್ನೆಲೆಯಲ್ಲಿ ಬಳ್ಳಾರಿಗೆ ಭೇಟಿ ನೀಡಲು ಅವಕಾಶ ನೀಡುವಂತೆ ಕೋರಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ.

ಕನಿಷ್ಠ ನಾಲ್ಕು ವಾರಗಳ ಕಾಲ ಬಳ್ಳಾರಿಗೆ ಭೇಟಿ ನೀಡಲು ತಮ್ಮ ಕಕ್ಷಿದಾರನಿಗೆ ಅವಕಾಶ ನೀಡುವಂತೆ ಅರ್ಜಿದಾರ ರೆಡ್ಡಿ ಪರ ವಾದ ಮಂಡಿಸಿದ ಹಿರಿಯ ವಕೀಲ ಮೀನಾಕ್ಷಿ ಅರೋರಾ ಮನವಿ ಮಾಡಿದ್ದರು. ನ್ಯಾಯಮೂರ್ತಿಗಳಾದ ಎಂ.ಆರ್.ಶಾ ಮತ್ತು ಕೃಷ್ಣ ಮುರಾರಿ ನೇತೃತ್ವದ ಪೀಠವು ಸಿಬಿಐಗೆ ಜನಾರ್ದನ ರೆಡ್ಡಿ ಅರ್ಜಿಯ ವಿಚಾರಣೆ ನಡೆಸಿ, ಸೆಪ್ಟೆಂಬರ್ 30ರಂದು ನ್ಯಾಯಾಲಯಕ್ಕೆ ವರದಿ ಸಲ್ಲಿಸುವಂತೆ ಸೂಚಿಸಿತ್ತು. ಸಿಬಿಐ ವರದಿಯನ್ನು ಪರಿಶೀಲಿಸಿದ ಬಳಿಕ ಇಂದು ನ್ಯಾಯಾಲಯ, ರೆಡ್ಡಿ ಅರ್ಜಿಯ ತೀರ್ಪನ್ನು ಪ್ರಕಟಿಸಲಿದೆ.

ಇದನ್ನೂ ಓದಿ:12 ವರ್ಷ ವಿಳಂಬ.. ಗಾಲಿ ಜನಾರ್ದನ ರೆಡ್ಡಿ ಕೇಸ್​ ಬಗ್ಗೆ ಸುಪ್ರೀಂಕೋರ್ಟ್ ಕಿಡಿ

2009ರಲ್ಲಿ ಅಕ್ರಮ ಗಣಿಗಾರಿಕೆ ಆರೋಪದ ಮೇಲೆ ಸಿಬಿಐ ಗಾಲಿ ಜನಾರ್ದನ ರೆಡ್ಡಿ ಹಾಗೂ ಇತರೆ 9 ಮಂದಿ ವಿರುದ್ಧ ಕೇಸ್​ ದಾಖಲಿಸಿತ್ತು. ಸೆಪ್ಟೆಂಬರ್ 5, 2011ರಂದು ಜನಾರ್ದನ ರೆಡ್ಡಿ ಬಂಧನವಾಗಿತ್ತು. ಬಳಿಕ ಸಾಕ್ಷ್ಯ ನಾಶ ಮಾಡುವ ಶಂಕೆ ಮೇಲೆ ಕರ್ನಾಟಕದ ಬಳ್ಳಾರಿ, ಕಡಪ, ಆಂಧ್ರಪ್ರದೇಶದ ಅನಂತಪುರ ಜಿಲ್ಲೆಗಳಿಗೆ ಭೇಟಿ ನೀಡುವಂತಿಲ್ಲ ಎಂಬ ಷರತ್ತಿನೊಂದಿಗೆ ಸುಪ್ರೀಂ ಕೋರ್ಟ್ ಜನವರಿ 20, 2015ರಂದು ಅವರಿಗೆ ಜಾಮೀನು ನೀಡಿತ್ತು. ಆದ್ದರಿಂದ ಬಳ್ಳಾರಿಗೆ ಭೇಟಿ ನೀಡುವ ಮೊದಲು ಜನಾರ್ದನ ರೆಡ್ಡಿ ಸುಪ್ರೀಂ ಕೋರ್ಟ್‌ ಅನುಮತಿ ಪಡೆಯಬೇಕಿದೆ.

ABOUT THE AUTHOR

...view details