ನವದೆಹಲಿ: ಪ್ರಾಣಿಗಳನ್ನು ಅಕ್ರಮವಾಗಿ ಸಾಗಾಟ ಮಾಡುವಾಗ ಆ ಪ್ರಾಣಿಗಳನ್ನು ಪ್ರಾಣಿ ಹಿಂಸೆ ತಡೆ ಕಾಯ್ದೆಯಡಿ ವಶಕ್ಕೆ ಪಡೆದುಕೊಳ್ಳುವ ಕ್ರಮವನ್ನು ಹಿಂತೆಗೆದುಕೊಳ್ಳಬೇಕು ಅಥವಾ ಮಾರ್ಪಡಿಸಬೇಕೆಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.
ಪ್ರಾಣಿ ಹಿಂಸೆ ತಡೆ ಕಾಯ್ದೆ ಮಾರ್ಪಾಡಿಗೆ ಕೇಂದ್ರಕ್ಕೆ ಸುಪ್ರೀಂ ನಿರ್ದೇಶನ - ಸುಪ್ರೀಂ ನ್ಯಾಯಮೂರ್ತಿಗಳಾದ ಎ.ಎಸ್.ಬೋಪಣ್ಣ
2017ರಲ್ಲಿ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಪ್ರಾಣಿ ಹಿಂಸೆ ತಡೆ ಕಾಯ್ದೆಯನ್ನು ಹಿಂಪಡೆಯಬೇಕು ಅಥವಾ ಮಾರ್ಪಡಿಸಬೇಕೆಂದು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚಿಸಿದೆ.
ಈ ಸಂಬಂಧ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎ.ಎಸ್.ಬೋಪಣ್ಣ ಹಾಗೂ ವಿ.ರಾಮಸುಬ್ರಮಣಿಯನ್ ಅವರನ್ನೊಳಗೊಂಡ ಪೀಠ, ಕೆಲ ಪ್ರಾಣಿಗಳು ಜನರ ಜೀವನೋಪಾಯದ ಮೂಲಗಳಾಗಿವೆ. ನಾವು ನಾಯಿ, ಬೆಕ್ಕುಗಳ ಬಗ್ಗೆ ಇಲ್ಲಿ ಉಲ್ಲೇಖಿಸುತ್ತಿಲ್ಲ. ಬದಲಾಗಿ ಆ ಪ್ರಾಣಿಗಳನ್ನೇ ನಂಬಿ ಬದುಕು ಕಟ್ಟಿಕೊಳ್ಳುವವರ ಸ್ಥಿತಿ ಏನಾಗಬೇಕು. ವ್ಯಕ್ತಿಯನ್ನು ಶಿಕ್ಷೆಗೆ ಒಳಪಡಿಸುವ ಮುನ್ನ ಪ್ರಾಣಿಗಳನ್ನು ವಶಕ್ಕೆ ಪಡೆದುಕೊಳ್ಳುವಂತಿಲ್ಲ ಎಂದು ತಿಳಿಸಿದೆ.
ಒಂದು ವೇಳೆ ಕೇಂದ್ರ ಸರ್ಕಾರ ಕಾಯ್ದೆ ಹಿಂಪಡೆಯಲು ಅಥವಾ ಮಾರ್ಪಡಿಸಲು ಹಿಂದೇಟು ಹಾಕಿದರೆ, ನ್ಯಾಯಾಲಯವೇ ಆ ಕಾಯ್ದೆಗೆ ತಡೆ ನೀಡುವ ಎಚ್ಚರಿಕೆಯನ್ನೂ ನೀಡಿದೆ.