ನವದೆಹಲಿ:ಜಮ್ಮು ಮತ್ತು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ವಿರುದ್ಧದ ದೇಶದ್ರೋಹ ಆರೋಪಕ್ಕೆ ಸಂಬಂಧಿಸಿದಂತೆ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಜಾಗೊಳಿಸಿದೆ.
ಫಾರೂಕ್ ಅಬ್ದುಲ್ಲಾ ವಿರುದ್ಧ ಪಿಐಎಲ್ ವಿಚಾರಣೆಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ನೇತೃತ್ವದ ನ್ಯಾಯಪೀಠ ವಿಚಾರಣೆ ನಿರಾಕರಿಸಿದ್ದು, ಅರ್ಜಿಯನ್ನು ವಜಾಗೊಳಿಸಿದೆ. ಸರ್ಕಾರದ ಅಭಿಪ್ರಾಯಕ್ಕಿಂತ ಭಿನ್ನವಾದ ಅಭಿಪ್ರಾಯಗಳ ಅಭಿವ್ಯಕ್ತಿಯನ್ನು ದೇಶದ್ರೋಹ ಎಂದು ಕರೆಯಲಾಗುವುದಿಲ್ಲ ಎಂದು ಪೀಠವು ಅಭಿಪ್ರಾಯಪಟ್ಟಿದೆ.