ಕರ್ನಾಟಕ

karnataka

ETV Bharat / bharat

ರಾಜೀವ್ ಗಾಂಧಿ ಹತ್ಯೆ ಪ್ರಕರಣ: ಕೇಂದ್ರ-ತಮಿಳುನಾಡು ಸರ್ಕಾರಗಳಿಗೆ ಸುಪ್ರೀಂ ನೋಟಿಸ್​

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಪರಾಧಿಗಳಾದ ನಳಿನಿ ಶ್ರೀಹರನ್ ಮತ್ತು ಪಿ ರವಿಚಂದ್ರನ್ ಅವರ ಮನವಿಯ ಮೇರೆಗೆ ಸುಪ್ರೀಂ ಕೋರ್ಟ್ ಕೇಂದ್ರ ಮತ್ತು ತಮಿಳುನಾಡು ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

SC issues notice to Centre and Tamil Nadu  Tamil Nadu government  pleas of Nalini Sriharan and P Ravichandran  ಕೇಂದ್ರ ತಮಿಳುನಾಡು ಸರ್ಕಾರಗಳಿಗೆ ಸುಪ್ರೀಂ ನೋಟಿಸ್​ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣ  ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿಗಳು  ಎಸ್ ನಳಿನಿ ಮತ್ತು ಪಿ ರವಿಚಂದ್ರನ್ ತಮ್ಮ ಬಿಡುಗಡೆ ಅರ್ಜಿ  ಮದ್ರಾಸ್ ಹೈಕೋರ್ಟ್ ಆದೇಶ  ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್
ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣ

By

Published : Sep 26, 2022, 1:20 PM IST

ನವದೆಹಲಿ:ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿಗಳು ಅವಧಿಪೂರ್ವ ಬಿಡುಗಡೆ ಕೋರಿ ಸಲ್ಲಿಸಿರುವ ಮನವಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತಮಿಳುನಾಡು ಸರ್ಕಾರ ಮತ್ತು ಕೇಂದ್ರ ಸರ್ಕಾರದಿಂದ ಪ್ರತಿಕ್ರಿಯೆ ಕೇಳಿದೆ.

ಎಸ್ ನಳಿನಿ ಮತ್ತು ಪಿ ರವಿಚಂದ್ರನ್ ತಮ್ಮ ಬಿಡುಗಡೆ ಅರ್ಜಿಯನ್ನು ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದರು. ಇದರ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್​ ತಮಿಳುನಾಡು ಮತ್ತು ಕೇಂದ್ರ ಸರ್ಕಾರಗಳಿಗೆ ಪ್ರತಿಕ್ರಿಯೆ ನೀಡುವಂತೆ ನೋಟಿಸ್​ ಜಾರಿ ಮಾಡಿದೆ.

ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರು ಮೇ 21, 1991 ರಂದು ತಮಿಳುನಾಡಿನ ಶ್ರೀಪೆರಂಬದೂರಿನಲ್ಲಿ ಚುನಾವಣಾ ಪ್ರಚಾರ ವೇಳೆ ಮಹಿಳಾ ಆತ್ಮಾಹುತಿ ಬಾಂಬರ್‌ನಿಂದ ಹತ್ಯೆಗೀಡಾಗಿದ್ದರು. ಈ ಹತ್ಯೆ ಏಳು ಜನರು ಜೈಲು ಶಿಕ್ಷೆ ಅನುಭವಿಸುತ್ತಿದ್ದರು. ಹತ್ಯೆಯ ಸಮಯದಲ್ಲಿ 19 ವರ್ಷ ವಯಸ್ಸಿನವನಾಗಿದ್ದ ಪೇರಾರಿವಾಲನ್ ರಾಜೀವ್ ಮೇನಲ್ಲಿ ಬಿಡುಗಡೆಯಾಗಿದ್ದರು.

ಓದಿ:ರಾಜೀವ್ ಗಾಂಧಿ: ದೇಶ ಕಂಡ ವರ್ಚಸ್ವಿ ನಾಯಕನ ಬಗ್ಗೆ ಕುತೂಹಲಕಾರಿ ಸಂಗತಿಗಳು..

For All Latest Updates

ABOUT THE AUTHOR

...view details