ನವದೆಹಲಿ:ನ್ಯಾಷನಲ್ ಡಿಫೆನ್ಸ್ ಅಕಾಡೆಮಿ (ಎನ್‌ಡಿಎ) ಪ್ರವೇಶ ಪರೀಕ್ಷೆಗಳಲ್ಲಿ ಮಹಿಳೆಯರಿಗೆ ಭಾಗವಹಿಸಲು ಅವಕಾಶ ನೀಡದಿರುವುದಕ್ಕೆ ಭಾರತೀಯ ಸೇನೆಯನ್ನು ಸುಪ್ರೀಂಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಸೇನೆಯ 'ನೀತಿ, ನಿರ್ಧಾರ' ಲಿಂಗ ತಾರತಮ್ಯವನ್ನು ತೋರಿಸುತ್ತಿದೆ ಎಂದು ಸುಪ್ರೀಂಕೋರ್ಟ್ ಖಾರವಾಗಿ ಪ್ರತಿಕ್ರಿಯಿಸಿತು.
ಎನ್‌ಡಿಎ ಪರೀಕ್ಷೆಗಳಲ್ಲಿ ಭಾಗವಹಿಸಲು ಮಹಿಳೆಯರಿಗೆ ಅವಕಾಶ ನೀಡಿದ ಸುಪ್ರೀಂಕೋರ್ಟ್
ನ್ಯಾಷನಲ್ ಡಿಫೆನ್ಸ್ ಅಕಾಡೆಮಿ(NDA) ಪ್ರವೇಶ ಪರೀಕ್ಷೆಗಳಲ್ಲಿ ಪಾಲ್ಗೊಳ್ಳಲು ಮಹಿಳೆಯರಿಗೆ ಅವಕಾಶ ನೀಡಿ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ.
ಎನ್‌ಡಿಎ ಪರೀಕ್ಷೆಗಳಲ್ಲಿ ಭಾಗವಹಿಸಲು ಮಹಿಳೆಯರಿಗೆ ಅವಕಾಶ
ಅಲ್ಲದೆ, ಸೆಪ್ಟೆಂಬರ್ 5ಕ್ಕೆ ನಿಗದಿಯಾಗಿರುವ ಎನ್‌ಡಿಎ ಪರೀಕ್ಷೆಗಳಲ್ಲಿ ಪಾಲ್ಗೊಳ್ಳಲು ನ್ಯಾಯಾಲಯವು ಮಹಿಳೆಯರಿಗೆ ಅನುಮತಿ ಕಲ್ಪಿಸಿತು. ಈ ವಿಷಯವು ನ್ಯಾಯಾಲಯದ ಅಂತಿಮ ಆದೇಶಗಳಿಗೆ ಒಳಪಟ್ಟಿರುತ್ತದೆ ದೇಶದ ಅತ್ಯುನ್ನತ ಕೋರ್ಟ್ ಹೇಳಿದೆ.