ನವದೆಹಲಿ:ಮಾಜಿ ಪ್ರಧಾನಮಂತ್ರಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ 30 ವರ್ಷಗಳಿಂದ ಜೈಲು ಶಿಕ್ಷೆ ಅನುಭವಿಸುತ್ತಿರುವ ಜೀವಾವಧಿ ಅಪರಾಧಿಗಳಲ್ಲಿ ಒಬ್ಬನಾದ ಎ.ಜಿ.ಪೆರಾರಿವಾಲನ್‌ನನ್ನು ಸುಪ್ರೀಂಕೋರ್ಟ್ ಬಿಡುಗಡೆಗೊಳಿಸಿ ಮಹತ್ವದ ಆದೇಶ ನೀಡಿತು. ನ್ಯಾಯಮೂರ್ತಿಗಳಾದ ನಾಗೇಶ್ವರ ರಾವ್, ಬಿ.ಆರ್.ಬವಾಯಿ ಮತ್ತು ಎ.ಎಸ್.ಬೋಪಣ್ಣ ಅವರಿದ್ದ ತ್ರಿಸದಸ್ಯ ಪೀಠ ಈ ಆದೇಶ ಪ್ರಕಟಿಸಿದೆ. ಈ ಆದೇಶ ಶ್ರೀಲಂಕಾ ಪ್ರಜೆಯಾದ ನಳಿನಿ ಶ್ರೀಹರನ್ ಹಾಗೂ ಆಕೆಯ ಪತಿ ಮುರುಗನ್ ಸೇರಿದಂತೆ ಇತರ ಆರು ಅಪರಾಧಿಗಳ ಬಿಡುಗಡೆಗೆ ದಾರಿ ಮಾಡಿಕೊಟ್ಟಿದೆ ಎಂದು ಹೇಳಲಾಗುತ್ತಿದೆ.
ಎ.ಜಿ.ಪೆರಾರಿವಾಲನ್ ಮೂರು ದಶಕಗಳಿಗೂ ಹೆಚ್ಚು ಕಾಲ ಶಿಕ್ಷೆ ಅನುಭವಿಸಿದ್ದರಿಂದ ಆತನನ್ನು ಜೈಲಿನಿಂದ ಬಿಡುಗಡೆ ಮಾಡುವಂತೆ ಸುಪ್ರೀಂಕೋರ್ಟ್ ಕೇಂದ್ರಕ್ಕೆ ಸೂಚಿಸಿದೆ. ರಾಜೀವ್ ಗಾಂಧಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೆರಾರಿವಾಲನ್ 31 ವರ್ಷಗಳ ಕಾಲ ಜೈಲು ಶಿಕ್ಷೆ ಅನುಭವಿಸಿದ್ದನು. ಹತ್ಯೆಯ ಸಮಯದಲ್ಲಿ 19 ವರ್ಷ ವಯಸ್ಸಿನವನಾಗಿದ್ದ ಈತ ಹತ್ಯೆಯ ಮಾಸ್ಟರ್‌ಮೈಂಡ್ ಎಲ್‌ಟಿಟಿಇ ವ್ಯಕ್ತಿ ಶಿವರಾಸನ್‌ಗಾಗಿ ಎರಡು 9-ವೋಲ್ಟ್ ಬ್ಯಾಟರಿಗಳನ್ನು ಖರೀದಿಸಿದ್ದನೆಂದು ಆರೋಪಿಸಲಾಗಿತ್ತು.
ಇದನ್ನೂ ಓದಿ:ರಾಜೀವ್ ಗಾಂಧಿ ಹತ್ಯೆ ಪ್ರಕರಣ: 29 ವರ್ಷದ ನೋವಿನ ಕಥೆ ಬಿಚ್ಚಿಟ್ಟ ಅಪರಾಧಿಯ ತಾಯಿ