ಕರ್ನಾಟಕ

karnataka

ಕೇರಳ ಗೋಲ್ಡ್‌ ಸ್ಮಗ್ಲಿಂಗ್‌ ಕೇಸಲ್ಲಿ ಆರೋಪಿಗಳಿಗೆ ಜಾಮೀನು; ಮಧ್ಯ ಪ್ರವೇಶಿಸಲ್ಲ ಎಂದು NIAಗೆ ಸುಪ್ರೀಂಕೋರ್ಟ್ ಸ್ಪಷ್ಟನೆ

By

Published : Jul 13, 2021, 5:51 PM IST

ಕೇರಳ ಗೋಲ್ಡ್‌ ಸ್ಮಗ್ಲಿಂಗ್‌ ಪ್ರಕರಣದಲ್ಲಿ ನೀಡಿರುವ ಜಾಮೀನು ಅರ್ಜಿ ವಿಚಾರದಲ್ಲಿ ಮಧ್ಯ ಪ್ರವೇಶಿಸಲು ಸುಪ್ರೀಂಕೋರ್ಟ್‌ ನಿರಾಕರಿಸಿದೆ. 14.82 ಕೋಟಿ ರೂಪಾಯಿ ಮೌಲ್ಯದ 30 ಕೆಜಿ 24 ಕ್ಯಾರಟ್‌ ಚಿನ್ನದ ಸ್ಮಗ್ಲಿಂಗ್‌ ಕೇಸ್‌ನಲ್ಲಿ 12 ಮಂದಿ ಆರೋಪಿಗಳಿಗೆ ಕೇರಳ ಹೈಕೋರ್ಟ್‌ ಜಾಮೀನು ನೀಡಿತ್ತು. ಇದನ್ನು ಪ್ರಶ್ನಿಸಿ ಎನ್‌ಐಎ ಸುಪ್ರೀಂ ಕೋರ್ಟ್‌ ಮೊರೆ ಹೋಗಿದೆ..

SC refuses to cancel bail of 12 in Kerala gold smuggling case, but agrees to examine legal issue
ಕೇರಳ ಗೋಲ್ಡ್‌ ಸ್ಮಗ್ಲಿಂಗ್‌ ಕೇಸಲ್ಲಿ ಆರೋಪಿಗಳಿಗೆ ಜಾಮೀನು; ಮಧ್ಯ ಪ್ರವೇಶಿಸಲ್ಲ ಎಂದು NIAಗೆ ಸುಪ್ರೀಂಕೋರ್ಟ್ ಸ್ಪಷ್ಟನೆ

ನವ ದೆಹಲಿ :ಕೇರಳದಲ್ಲಿ ನಡೆದಿರುವ 14.82 ಕೋಟಿ ರೂಪಾಯಿ ಮೌಲ್ಯದ 30 ಕೆಜಿ 24 ಕ್ಯಾರಟ್‌ ಚಿನ್ನದ ಸ್ಮಗ್ಲಿಂಗ್‌ ಕೇಸ್‌ನಲ್ಲಿ ರಾಷ್ಟ್ರೀಯ ತನಿಖಾ ದಳಕ್ಕೆ ಅಲ್ಪ ಹಿನ್ನಡೆಯಾಗಿದೆ. ಪ್ರಕರಣದಲ್ಲಿ ಕೇರಳ ಹೈಕೋರ್ಟ್‌ 12 ಮಂದಿ ಆರೋಪಿಗಳಿಗೆ ಜಾಮೀನು ನೀಡಿದ್ದನ್ನು ಪ್ರಶ್ನಿಸಿ ಎನ್‌ಐಎ ಸುಪ್ರೀಂಕೋರ್ಟ್‌ ಮೊರೆ ಹೋಗಿತ್ತು. ಆದರೆ, ಜಾಮೀನು ರದ್ದು ಮಾಡಲು ಸುಪ್ರೀಂಕೋರ್ಟ್‌ ನಿರಾಕರಿಸಿದ್ದು, ತಾವು ಹೈಕೋರ್ಟ್‌ ನೀಡಿರುವ ಆದೇಶದಲ್ಲಿ ಮಧ್ಯಪ್ರವೇಶಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

ಹೈಕೋರ್ಟ್‌ ನೀಡಿರುವ ತೀರ್ಪನ್ನು ಪ್ರಶ್ನಿಸಿರುವ ಅರ್ಜಿ ಪರಿಶೀಲನೆಗೆ ಸುಪ್ರೀಂಕೋರ್ಟ್ ಒಪ್ಪಿಕೊಂಡಿತು, ಚಿನ್ನ ಕಳ್ಳಸಾಗಣೆ ಕಸ್ಟಮ್ಸ್ ಕಾಯ್ದೆಯ ವ್ಯಾಪ್ತಿಗೆ ಒಳಪಡಿಸಲಾಗಿದೆ ಮತ್ತು ಸೆಕ್ಷನ್ 15ರ (1) (ಎ) (iiia) ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ ಅಡಿಯಲ್ಲಿ ಭಯೋತ್ಪಾದಕ ಕಾಯ್ದೆಯ ವ್ಯಾಖ್ಯಾನಕ್ಕೆ ಬರುವುದಿಲ್ಲ ಎಂದು ಕೋರ್ಟ್‌ ಹೇಳಿದೆ.

ಪ್ರಕರಣದ ಎಲ್ಲಾ ಆರೋಪಿಗಳು ಸರ್ಕಾರದ ಉದ್ಯೋಗಿಗಳಾಗಿದ್ದಾರೆ. ಜಾಮೀನು ನೀಡಿರುವ ವಿಷಯದಲ್ಲಿ ನಾವು ಮಧ್ಯ ಪ್ರವೇಶಿಸುವುದಿಲ್ಲ. ಬೇಕಾದರೆ ಕಾನೂನು ಪ್ರಶ್ನೆಯನ್ನು ಮುಕ್ತವಾಗಿ ಬಿಡಬಹುದು ಎಂದು ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ಮತ್ತು ನ್ಯಾಯಮೂರ್ತಿಗಳಾದ ಎಸ್ ಎಸ್ ಬೋಪಣ್ಣ ಮತ್ತು ಹೃಷಿಕೇಶ್ ರಾಯ್ ಅವರನ್ನೊಳಗೊಂಡ ನ್ಯಾಯಪೀಠ ಹೇಳಿದೆ.

ಇದನ್ನೂ ಓದಿ:19 ವರ್ಷದ ಹಿಂದೆ 'ದಾದಾ'ಗಿರಿಯ ಆದಿನ.. ಲಾರ್ಡ್ಸ್​ನಲ್ಲಿ ಗಂಗೂಲಿ ಬಟ್ಟೆ ಬಿಚ್ಚಿ ಸೇಡು ತೀರಿಸಿಕೊಂಡಿದ್ದರು..

ಎನ್‌ಐಎ ಪರ ಹಾಜರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ ಎಂ ನಟರಾಜ್‌, ಜಾಮೀನು ನೀಡುವುದರ ಜೊತೆಗೆ, ಕಳ್ಳಸಾಗಣೆಗೆ ಸಂಬಂಧಿಸಿದಂತೆ ಭಯೋತ್ಪಾದಕ ಕೃತ್ಯದ ಬಗ್ಗೆ ಹೈಕೋರ್ಟ್ ವ್ಯಾಖ್ಯಾನಿಸಿದೆ. ಈ ಅಂಶವನ್ನು ಸುಪ್ರೀಂಕೋರ್ಟ್‌ ಪರಿಗಣಿಸಬೇಕಾಗಿದೆ ಎಂದು ಪೀಠದ ಮುಂದೆ ಮನವಿ ಮಾಡಿದರು. ಪ್ರಕರಣಕ್ಕೂ ಉಗ್ರರಿಗೆ ಏನಾದರೂ ಸಂಪರ್ಕ ಇದೆಯೇ ಎಂಬುದರ ಬಗ್ಗೆ ಎನ್ಐಎ ತನಿಖೆ ನಡೆಸುತ್ತಿದೆ.

2020ರ ಜುಲೈ 5ರಂದು ತಿರುವನಂತಪುರಂ ವಿಮಾನ ನಿಲ್ದಾಣದಲ್ಲಿ 14.82 ಕೋಟಿ ಮೌಲ್ಯ 30 ಕೆಜಿ ಚಿನ್ನವನ್ನು ಜಪ್ತಿ ಮಾಡಲಾಗಿತ್ತು. ಇದು ‌ಕಳ್ಳ ಸಾಗಣೆ ಮಾಡಿದ್ದ ಚಿನ್ನ ಎಂಬುದು ಮೇಲ್ನೋಟಕ್ಕೆ ಸ್ಪಷ್ಟವಾಗಿತ್ತು.

ABOUT THE AUTHOR

...view details