ಕೊಚ್ಚಿ: ಕೇರಳ ಮೀನುಗಾರಿಕೆ ಮತ್ತು ಸಾಗರ ಅಧ್ಯಯನ ವಿಶ್ವವಿದ್ಯಾಲಯದ (ಕೆಯುಎಫ್ಒಎಸ್) ಉಪಕುಲಪತಿಯಾಗಿ ತಮ್ಮ ನೇಮಕ ರದ್ದುಗೊಳಿಸಿದ ಕೇರಳ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಡಾ.ಕೆ.ರಿಜಿ ಜಾನ್ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಸೋಮವಾರ ನೋಟಿಸ್ ಜಾರಿ ಮಾಡಿದೆ.
ವಿಸಿ ನೇಮಕಾತಿ ರದ್ದುಗೊಳಿಸಿದ ಕೇರಳ ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು ಸುಪ್ರೀಂ ನಿರಾಕರಣೆ - SC refuses to stay Kerala HC order revoking VC
ಕೇರಳ ಮೀನುಗಾರಿಕೆ ಮತ್ತು ಸಾಗರ ಅಧ್ಯಯನ ವಿಶ್ವವಿದ್ಯಾಲಯದ (ಕೆಯುಎಫ್ಒಎಸ್) ಉಪಕುಲಪತಿಯಾಗಿ ಡಾ.ರಿಜಿ ಜಾನ್ ಅವರ ನೇಮಕ ರದ್ದುಗೊಳಿಸಿದ ಕೇರಳ ಹೈಕೋರ್ಟ್ ಆದೇಶಕ್ಕೆ ತಡೆಯಾಜ್ಞೆ ನೀಡಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ.
ಸುಪ್ರೀಂ ಕೋರ್ಟ್
ಈ ವಿಷಯಕ್ಕೆ ಸಂಬಂಧಿಸಿದಂತೆ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಹಿಮಾ ಕೊಹ್ಲಿ ಅವರನ್ನೊಳಗೊಂಡ ಪೀಠವು ಹೈಕೋರ್ಟ್ ಆದೇಶಕ್ಕೆ ತಡೆಯಾಜ್ಞೆ ನೀಡಲು ನಿರಾಕರಿಸಿದೆ. ಕೇರಳ ರಾಜ್ಯದ ಪರ ಹಿರಿಯ ವಕೀಲರಾದ ಜೈದೀಪ್ ಗುಪ್ತಾ ಮತ್ತು ಕೆಕೆ ವೇಣುಗೋಪಾಲ್ ಅವರು ತಡೆಯಾಜ್ಞೆ ಅಥವಾ ಯಥಾಸ್ಥಿತಿ ಆದೇಶಕ್ಕೆ ಒತ್ತಾಯಿಸಿದರು. ಆದರೆ, ಪೀಠ ಎರಡು ವಾರಗಳ ನಂತರ ವಿಷಯವನ್ನು ವಿಲೇವಾರಿ ಮಾಡುವುದಾಗಿ ಹೇಳಿತು.
ಇದನ್ನೂ ಓದಿ:ರಾಜ್ಯಪಾಲರನ್ನು ರಾಜ್ಯದಿಂದ ಹೊರ ಕಳುಹಿಸಿ: ಶಿವಾಜಿ ವಿವಾದದ ಬೆನ್ನಲ್ಲೇ ಬಿಜೆಪಿಗೆ ಶಿಂಧೆ ಬಣದ ನಾಯಕರ ಒತ್ತಾಯ