ನವದೆಹಲಿ:ಆಧಾರ್ ಕಾರ್ಡ್ ಜತೆ ಲಿಂಕ್ ಇಲ್ಲದಿರುವ 3 ಕೋಟಿ ಪಡಿತರ ಚೀಟಿಗಳನ್ನು ರದ್ದುಪಡಿಸುವ ವಿರುದ್ಧ ಸಲ್ಲಿಸಿದ್ದ ಅರ್ಜಿಯ ಕುರಿತು ಸುಪ್ರೀಂಕೋರ್ಟ್ ಕಳವಳ ವ್ಯಕ್ತಪಡಿಸಿ ಕೇಂದ್ರಕ್ಕೆ ನೋಟಿಸ್ ಜಾರಿಗೊಳಿಸಿದೆ.
ಸಿಜೆಐ ಎಸ್.ಎ.ಬೊಬ್ಡೆ, ನ್ಯಾಯಮೂರ್ತಿ ಎ.ಎಸ್.ಬೋಪಣ್ಣ ಮತ್ತು ನ್ಯಾಯಮೂರ್ತಿ ವಿ.ರಾಮಸುಬ್ರಮಣಿಯನ್ ಅವರನ್ನೊಳಗೊಂಡ ನ್ಯಾಯಪೀಠವು, ಈ ವಿಷಯವು ತುಂಬಾ ಗಂಭೀರವಾಗಿದೆ. ಇದು ಆಧಾರ್ ಒಳಗೊಂಡಿರುವುದರಿಂದ ಕೇಂದ್ರದ ಪ್ರತಿಕ್ರಿಯೆ ಕೇಳಲು ಬಯಸುತ್ತೇವೆ ಎಂದಿದೆ.