ಕರ್ನಾಟಕ

karnataka

ETV Bharat / bharat

ನ್ಯಾಯಮಂಡಳಿಗಳಲ್ಲಿ ಖಾಲಿ ಹುದ್ದೆ ವಿಚಾರ: ಅಧಿಕಾರಿಗಳ ವಿರುದ್ಧ ಸುಪ್ರೀಂಕೋರ್ಟ್‌ ತೀವ್ರ ಆಕ್ರೋಶ

ನ್ಯಾಯಮಂಡಳಿಗಳಲ್ಲಿ ಖಾಲಿ ಇರುವ ಹುದ್ದೆಗಳ ಕುರಿತು ಸಲ್ಲಿಸಲಾದ ಅರ್ಜಿಯ ವಿಚಾರಣೆಯ ಸಮಯದಲ್ಲಿ ಅಧಿಕಾರಿಗಳ ನಡವಳಿಕೆಗೆ ಸುಪ್ರೀಂಕೋರ್ಟ್ ಗರಂ ಆಗಿದೆ. ನ್ಯಾಯಾಧಿಕರಣಗಳು ಇಬರಬೇಕು ಅಂದ ಅಂದುಕೊಡಿದ್ದೀರಾ? ಬೇಡ ಎಂದು ಕೊಂಡಿದ್ದೀರಾ ಎಂದು ಖಾರವಾಗಿ ಪ್ರಶ್ನಿಸಿದೆ. ನ್ಯಾಯಾಧಿಕರಣಗಳ ಉಪಸ್ಥಿತಿಯು ಅಧಿಕಾರಿಗಳಿಗೆ ಇಷ್ಟವಾದಂತೆ ಕಾಣುತ್ತಿಲ್ಲ ಎಂತಲೂ ಕೋರ್ಟ್‌ ಪ್ರತಿಕ್ರಿಯಿಸಿದೆ.

sc seeks centres reply on vacancies in tribunals matter
ನ್ಯಾಯಮಂಡಳಿಗಳಲ್ಲಿ ಖಾಲಿ ಹುದ್ದೆ ವಿಚಾರ; ಅಧಿಕಾರಿಗಳ ವಿರುದ್ಧ ಸುಪ್ರೀಂ ಕೋರ್ಟ್‌ ತೀವ್ರ ಆಕ್ರೋಶ

By

Published : Aug 6, 2021, 10:50 PM IST

ನವದೆಹಲಿ: ದೇಶದಲ್ಲಿ ನ್ಯಾಯಾಧಿಕರಣಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ಅಧಿಕಾರಿಗಳ ವರ್ತನೆಗೆ ಸುಪ್ರೀಂಕೋರ್ಟ್ ಆಕ್ರೋಶ ವ್ಯಕ್ತಪಡಿಸಿದೆ. ನ್ಯಾಯಾಧಿಕರಣಗಳ ಉಪಸ್ಥಿತಿಯು ಅಧಿಕಾರಿಗಳಿಗೆ ಇಷ್ಟವಾದಂತೆ ಕಾಣುತ್ತಿಲ್ಲ ಎಂದು ಹೇಳಿದೆ.

ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಮತ್ತು ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ನ್ಯಾಯಪೀಠದಲ್ಲಿ ಖಾಲಿ ಹುದ್ದೆಗಳ ಕುರಿತು ಸಲ್ಲಿಸಲಾದ ಅರ್ಜಿ ವಿಚಾರಣೆ ಇಂದು ನಡೆಸಿತು. ಈ ಸಂದರ್ಭದಲ್ಲಿ ಅಧಿಕಾರಿಗಳ ವರ್ತನೆಗೆ ಸಿಜೆಐ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನ್ಯಾಯಮಂಡಳಿಗಳು ಇಲ್ಲದಿದ್ದರೇ ಒಳ್ಳೆಯದು ಎಂದು ಅಧಿಕಾರಿಶಾಹಿ ಬಯಸುತ್ತದೆಯೇ? ಎಂದು ಸಿಜೆಐ ಪ್ರಶ್ನಿಸಿದ್ದಾರೆ. ಅಧಿಕಾರಿಗಳು ಒಂದೇ ರೀತಿ ಕಾಣುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮುಂದಿನ ವಿಚಾರಣೆಯ ಸಮಯದಲ್ಲಿ ಈ ವಿಷಯವನ್ನು ತಪ್ಪದೇ ತಿಳಿಸುವಂತೆ ಸಾಲಿಸಿಟರ್ ಜನರಲ್‌ಗೆ ಸಿಜೆಐ ನ್ಯಾಯಮೂರ್ತಿ ಎನ್.ವಿ. ರಮಣ ಆದೇಶಿಸಿದ್ದಾರೆ. ಈ ಕುರಿತು ಏನು ಕ್ರಮ ಕೈಗೊಳ್ಳಲಾಗಿದೆ ಎಂಬುದನ್ನು ಹತ್ತು ದಿನಗಳ ಒಳಗೆ ತಿಳಿಸುವಂತೆ ಕೇಂದ್ರಕ್ಕೆ ನೋಟಿಸ್ ನೀಡಲಾಗಿದೆ.

ABOUT THE AUTHOR

...view details