ನವದೆಹಲಿ: ಇಲ್ಲಿನ ಚುನಾವಣೆಯಲ್ಲಿ ಅನಿವಾಸಿ ಭಾರತೀಯರಿಗೆ ಮತದಾನದ ಹಕ್ಕು ಕೋರಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಕುರಿತು ಸುಪ್ರೀಂ ಕೋರ್ಟ್ ಇಂದು ಕೇಂದ್ರ ಮತ್ತು ಚುನಾವಣಾ ಆಯೋಗದಿಂದ ಅಭಿಪ್ರಾಯ ಕೇಳಿದೆ.
ಅನಿವಾಸಿ ಭಾರತೀಯರಿಗೆ ಮತದಾನದ ಹಕ್ಕು..ಕೇಂದ್ರ, ಚುನಾವಣಾ ಆಯೋಗದ ಅಭಿಪ್ರಾಯ ಕೇಳಿದ ಸುಪ್ರೀಂ
ಅನಿವಾಸಿ ಭಾರತೀಯರಿಗೆ ಮತದಾನದ ಹಕ್ಕು ಸಂಬಂಧ ಸುಪ್ರೀಂ ಕೋರ್ಟ್ ಇಂದು ಕೇಂದ್ರ ಮತ್ತು ಚುನಾವಣಾ ಆಯೋಗದಿಂದ ಅಭಿಪ್ರಾಯ ಕೇಳಿದೆ.
ಸುಪ್ರೀಂ ಕೋರ್ಟ್
ಅನಿವಾಸಿ ಭಾರತೀಯರಿಗೆ ಮತದಾನದ ಹಕ್ಕು ನೀಡುವಂತೆ ಕೇರಳ ಪ್ರವಾಸಿ ಅಸೋಸಿಯೇಷನ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ಮತ್ತು ನ್ಯಾಯಮೂರ್ತಿಗಳಾದ ಜೆ.ಕೆ ಮಹೇಶ್ವರಿ ಮತ್ತು ಹಿಮಾ ಕೊಹ್ಲಿ ಅವರನ್ನೊಳಗೊಂಡ ಪೀಠವು ವಿಚಾರಣೆ ನಡೆಸಿತು. ಈ ಬಗ್ಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ ಮತ್ತು ಸಮಸ್ಯೆಯ ಕುರಿತು ಬಾಕಿ ಇರುವ ಪಿಐಎಲ್ ಗಳನ್ನು ಗಮನಕ್ಕೆ ತರಲು ಆದೇಶಿಸಿದೆ.
ಇದನ್ನೂ ಓದಿ:ಅವರಿಗೆ 99.. 100ನೇ ಮರಿಮೊಮ್ಮಗನನ್ನು ನೋಡಿದ ಭಾಗ್ಯಶಾಲಿ ವೃದ್ಧೆ