ಕರ್ನಾಟಕ

karnataka

By

Published : Aug 29, 2022, 2:12 PM IST

ETV Bharat / bharat

ಈದ್ಗಾ ಮೈದಾನದಲ್ಲಿ ಗಣೇಶ ಚತುರ್ಥಿ... ಹೈಕೋರ್ಟ್​ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಕೆ

ಅರ್ಜಿದಾರರ ಪರ ಮನವಿಯನ್ನು ಆಲಿಸಿದ ಕೋರ್ಟ್​ ಮಂಗಳವಾರ ಈ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಕೊಂಡಿತು. ಕಳೆದ ವಾರ ಈ ಬಗೆಗಿನ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್​​ ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಗಣೇಶ ಚತುರ್ಥಿ ಆಚರಣೆಗೆ ಅನುಮತಿ ನೀಡಿತ್ತು

SC to hear Ktaka Muslim body against HC order
ಈದ್ಗಾ ಮೈದಾನದಲ್ಲಿ ಗಣೇಶ ಚತುರ್ಥಿ

ನವದೆಹಲಿ: ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಗಣೇಶ ಚತುರ್ಥಿ ಆಚರಣೆಗೆ ಅನುಮತಿ ನೀಡಿರುವ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಕರ್ನಾಟಕ ವಕ್ಫ್ ಬೋರ್ಡ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.

ಮುಖ್ಯ ನ್ಯಾಯಮೂರ್ತಿ ಯು.ಯು ನೇತೃತ್ವದ ಪೀಠದ ಮುಂದೆ ಮುಸ್ಲಿಂ ಬೋರ್ಡ್ ಪರ​ ಹಿರಿಯ ವಕೀಲ ಕಪಿಲ್ ಸಿಬಲ್ ಕರ್ನಾಟಕ ಹೈಕೋರ್ಟ್​ ನೀಡಿರುವ ತೀರ್ಪಿನ ವಿರುದ್ಧ ಅರ್ಜಿ ಸಲ್ಲಿಸಿ ವಾದ ಮಂಡಿಸಿದರು. ಈ ಸಂಬಂಧದ ವಿಷಯದ ತುರ್ತು ವಿಚಾರಣೆ ನಡೆಸುವಂತೆ ಮನವಿ ಮಾಡಿದರು. ಈದ್ಗಾ ಮೈದಾನದ ವಿಚಾರವಾಗಿ ಅನಗತ್ಯ ಧಾರ್ಮಿಕ ಉದ್ವಿಗ್ನತೆ ಸೃಷ್ಟಿಸಲಾಗುತ್ತಿದೆ ಎಂದು ಸಿಬಲ್ ದೂರಿದರು.

ಈ ಬಗ್ಗೆ ಅರ್ಜಿದಾರರ ಪರ ಮನವಿಯನ್ನು ಆಲಿಸಿದ ಕೋರ್ಟ್​ ಮಂಗಳವಾರ ಈ ಅರ್ಜಿಯ ವಿಚಾರಣೆ ನಡೆಸಲು ಒಪ್ಪಿಕೊಂಡಿತು. ಕಳೆದ ವಾರ ಈ ಬಗೆಗಿನ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್​​ ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಗಣೇಶ ಚತುರ್ಥಿ ಆಚರಣೆಗೆ ಅನುಮತಿ ನೀಡಿತ್ತು.

ಮೈದಾನದಲ್ಲಿ ಉತ್ಸವಕ್ಕೆ ಅನುಮತಿ ನೀಡಲು ಸರ್ಕಾರವು ತನ್ನದೇ ನಿರ್ಧಾರ ಕೈಗೊಳ್ಳಬಹುದು ಎಂದು ಹೈಕೋರ್ಟ್ ಹೇಳಿತ್ತು. ಈ ಮೊದಲು ಮುಸ್ಲಿಂ ಬೋರ್ಡ್​ ಸಲ್ಲಿಕೆ ಮಾಡಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಕೋರ್ಟ್​​ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಆಗಸ್ಟ್ 25ರಂದು ನೀಡಿದ್ದ ಮಧ್ಯಂತರ ಆದೇಶ ನೀಡಿತ್ತು. ಆದರೆ ಹೈಕೋರ್ಟ್​ನ ಮಧ್ಯಂತರ ಆದೇಶ ಪ್ರಶ್ನಿಸಿ ಹಿಂದೂ ಪರ ಸಂಘಟನೆಗಳು ಸಲ್ಲಿಕೆ ಮಾಡಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್​​ ಆಚರಣೆಗೆ ಅನುಮತಿ ನೀಡಿತ್ತು.

ಆಗಸ್ಟ್ 31 ರಿಂದ ಸೀಮಿತ ಅವಧಿಗೆ ಧಾರ್ಮಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸಲು ಅನುಮತಿ ನೀಡುವ ಸಂಬಂಧ ರಾಜ್ಯ ಸರ್ಕಾರಕ್ಕೆ ನಿರ್ಧಾರ ಕೈಗೊಳ್ಳುವ ಆದೇಶ ನೀಡಿತ್ತು.

ಇದನ್ನು ಓದಿ:ಹಿಂದೂ ದೇಗುಲಗಳ ಮೇಲೆ ಕಮ್ಯೂನಿಸ್ಟ್​ ಸರ್ಕಾರಗಳ ಹಿಡಿತ: ನಿವೃತ್ತ ನ್ಯಾ. ಇಂದು ಮಲ್ಹೋತ್ರಾ

ABOUT THE AUTHOR

...view details