ನವದೆಹಲಿ:ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ (ಸಿಬಿಎಸ್‌ಇ) ಮತ್ತು ಇತರ ಹಲವು ಪರೀಕ್ಷಾ ಮಂಡಳಿಗಳು ನಡೆಸಲಿರುವ 10 ಮತ್ತು 12ನೇ ತರಗತಿಗಳ ಆಫ್‌ಲೈನ್ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ನಾಳೆ ಬುಧವಾರ ವಿಚಾರಣೆ ನಡೆಸುವುದಾಗಿ ಸುಪ್ರೀಂಕೋರ್ಟ್ ತಿಳಿಸಿದೆ.
ಏಪ್ರಿಲ್‌ನಿಂದ 10 ಮತ್ತು 12ನೇ ತರಗತಿಗೆ 2ನೇ ಹಂತದ ಬೋರ್ಡ್ ಪರೀಕ್ಷೆಗಳನ್ನು ನಡೆಸಲು ಸಿಬಿಎಸ್‌ಇ ನಿರ್ಧರಿಸಿದೆ. ಕೋವಿಡ್ ಕಾರಣದಿಂದಾಗಿ ಅನೇಕ ವಿದ್ಯಾರ್ಥಿಗಳಿಗೆ ಭೌತಿಕ ಪರೀಕ್ಷೆ ಬರೆಯಲು ಆಗುವುದಿಲ್ಲ ಎಂದು ವಕೀಲ ಪ್ರಶಾಂತ್ ಪದ್ಮನಾಭನ್ ಅವರ ಮೂಲಕ ಮನವಿ ಸಲ್ಲಿಸಲಾಗಿದೆ.