ಕರ್ನಾಟಕ

karnataka

ETV Bharat / bharat

ದೆಹಲಿ ಗಡಿಗಳಿಂದ ಪ್ರತಿಭಟನಾನಿರತ ರೈತರ ತೆರವು ವಿಚಾರ: ಇಂದು ಅರ್ಜಿಗಳ ವಿಚಾರಣೆ - 'ದೆಹಲಿ ಚಲೋ' ಪ್ರತಿಭಟನೆ

ಕಳೆದ 20 ದಿನಗಳಿಂದ ದೆಹಲಿಯ ಗಡಿಭಾಗಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ತೆರವುಗೊಳಿಸಲು ಕೋರಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಇಂದು ಸುಪ್ರೀಂಕೋರ್ಟ್​ ಮುಂದುವರೆಸಲಿದೆ.

Supreme Court
ಸುಪ್ರೀಂಕೋರ್ಟ್

By

Published : Dec 17, 2020, 9:52 AM IST

ನವದೆಹಲಿ: ದೆಹಲಿಯ ಗಡಿಭಾಗಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಅಲ್ಲಿಂದ ತೆರವುಗೊಳಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಇಂದು ಸುಪ್ರೀಂಕೋರ್ಟ್​ ನಡೆಸಲಿದೆ.

ರೈತ ಪ್ರತಿಭಟನೆಗೆ ಸಂಬಂಧಿಸಿದಂತೆ ಅರ್ಜಿಗಳ ವಿಚಾರಣೆಯನ್ನು ನಿನ್ನೆಯಿಂದ ಸುಪ್ರೀಂಕೋರ್ಟ್​ನ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೊಬ್ಡೆ ನೇತೃತ್ವದ ನ್ಯಾಯಪೀಠ ಆರಂಭಿಸಿದೆ. ಸರ್ಕಾರ ಹಾಗೂ ರೈತರ ಪ್ರತಿನಿಧಿಗಳನ್ನು ಒಳಗೊಂಡ ಸಮಿತಿ ರಚಿಸಿ, ಸಮಸ್ಯೆ ಬಗೆಹರಿಸುವಂತೆ ನ್ಯಾಯಪೀಠವು ನಿನ್ನೆ ಕೇಂದ್ರ ಸರ್ಕಾರಕ್ಕೆ ಸೂಚಿಸಿತ್ತು. ಪ್ರತಿಭಟನೆ ವಿರೋಧಿ ಸಲ್ಲಿಕೆಯಾಗಿರುವ ಅರ್ಜಿಗಳಿಗೆ ಪ್ರತಿವಾದಿಗಳಾಗಲು ಎಂಟು ರೈತ ಸಂಘಗಳಿಗೆ ಅನುಮತಿ ನೀಡಿತ್ತು. ಇಂದು ವಿಚಾರಣೆ ಮುಂದುವರೆಯಲಿದೆ.

ಓದಿ:ದೆಹಲಿಯಲ್ಲಿ ರೈತರ ದಂಗಲ್.. ಸಮಿತಿ ರಚನೆ ಮಾಡಿ ಸಮಸ್ಯೆ ಇತ್ಯರ್ಥಪಡಿಸಲು ಸುಪ್ರೀಂಕೋರ್ಟ್‌ ಸೂಚನೆ

ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳ ವಿರುದ್ಧ ಸಿಂಘು, ಟಿಕ್ರಿ ಸೇರಿದಂತೆ ದೆಹಲಿಯ ಗಡಿಗಳಲ್ಲಿ ಪಂಜಾಬ್​ ಹಾಗೂ ಹರಿಯಾಣ ರೈತರು ಕಳೆದ 20 ದಿನಗಳಿಂದ 'ದೆಹಲಿ ಚಲೋ' ಪ್ರತಿಭಟನೆ ನಡೆಸುತ್ತಿದ್ದಾರೆ. ಗಡಿಭಾಗಗಳಲ್ಲೇ ರೈತರನ್ನು ದೆಹಲಿ ಪ್ರವೇಶಿಸದಂತೆ ತಡೆಯಲಾಗುತ್ತಿದೆ. ಪಟ್ಟುಬಿಡದ ರೈತರು ಬಿಸಿಲು-ಚಳಿ ಎನ್ನದೇ ಹಗಲು-ರಾತ್ರಿ ಧರಣಿ ಮುಂದುವರೆಸಿದ್ದಾರೆ. ಕೇಂದ್ರ ಸರ್ಕಾರ ರೈತ ಮುಖಂಡರೊಂದಿಗೆ ನಡೆಸಿದ ಮಾತುಕತೆಗಳೂ ವಿಫಲವಾಗಿವೆ.

ರಸ್ತೆ ತಡೆಗಳಿಂದಾಗಿ ಪ್ರಯಾಣಿಕರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅಲ್ಲದೇ ಹೀಗೆ ದೊಡ್ಡ ಮಟ್ಟದಲ್ಲಿ ಗುಂಪುಗೂಡಿ ಧರಣಿ ನಡೆಸುವುದು ಕೋವಿಡ್​ ಕೇಸ್​ಗಳ ಹೆಚ್ಚಳಕ್ಕೆ ಕಾರಣವಾಗಬಹುದು. ಹೀಗಾಗಿ ಪ್ರತಿಭಟನಾ ಸ್ಥಳದಿಂದ ರೈತರನ್ನು ತೆರವುಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡುವಂತೆ ಮನವಿ ಮಾಡಿ ಅರ್ಜಿಗಳು ಸಲ್ಲಿಕೆಯಾಗಿವೆ.

ABOUT THE AUTHOR

...view details