ಕರ್ನಾಟಕ

karnataka

ETV Bharat / bharat

ಶಾಲೆ ತೆರೆಯಲು ಮಾರ್ಗಸೂಚಿ ಹೊರಡಿಸಿದ ಕೇಂದ್ರ ಸರ್ಕಾರ.. ಏನೆಲ್ಲ ನಿಯಮ ಪಾಲನೆ?

School reopening guidelines released by Education Ministry: ಕರ್ನಾಟಕ, ಮಹಾರಾಷ್ಟ್ರ, ರಾಜಸ್ಥಾನ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಈಗಾಗಲೇ ಶಾಲಾ-ಕಾಲೇಜು ಪುನಾರಂಭಗೊಂಡಿವೆ. ಇದರ ಮಧ್ಯೆ ಕೇಂದ್ರ ಸರ್ಕಾರ ಶಾಲೆ ರೀ ಓಪನ್ ಮಾಡಲು ಮಹತ್ವದ ಮಾರ್ಗಸೂಚಿ ಹೊರಡಿಸಿದೆ.

School reopening guidelines released by Education Ministry
School reopening guidelines released by Education Ministry

By

Published : Feb 3, 2022, 7:42 PM IST

ನವದೆಹಲಿ: ಕೊರೊನಾ ಮಹಾಮಾರಿ ಮೂರನೇ ಅಲೆ ಮಧ್ಯೆ ಈಗಾಗಲೇ ಅನೇಕ ರಾಜ್ಯಗಳಲ್ಲಿ ಶಾಲಾ-ಕಾಲೇಜುಗಳು ಪುನಾರಂಭಗೊಂಡಿವೆ. ಕೋವಿಡ್ ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯವಾದ ಇಳಿಕೆ ಕಂಡು ಬಂದಿರುವ ಕಾರಣ ಇದೀಗ ಶಾಲೆ ತೆರೆಯಲು ಕೇಂದ್ರ ಸರ್ಕಾರ ಮಹತ್ವದ ಮಾರ್ಗಸೂಚಿ ಹೊರಡಿಸಿದೆ.

ಎಲ್ಲ ರಾಜ್ಯಗಳೊಂದಿಗೆ ಸಮಾಲೋಚನೆ ನಡೆಸಿದ ನಂತರ ಕೇಂದ್ರ ಶಿಕ್ಷಣ ಸಚಿವಾಲಯ ಈ ಮಾರ್ಗಸೂಚಿ ಹೊರಡಿಸಿದ್ದು, ಶಾಲೆಗಳನ್ನ ಪುನಾರಂಭ ಮಾಡಲು ರಾಜ್ಯಗಳು ತಮ್ಮದೇ ಆದ ಮಾರ್ಗಸೂಚಿ ಹೊರಡಿಸಲು ಮುಕ್ತವಾಗಿವೆ ಎಂದು ತಿಳಿಸಿದೆ.

ಇದನ್ನೂ ಓದಿರಿ:ಉತ್ತರ ಪ್ರದೇಶದಲ್ಲಿ ಅಸಾದುದ್ದೀನ್ ಓವೈಸಿ ಕಾರಿನ ಮೇಲೆ ಗುಂಡಿನ ದಾಳಿ..!

ಕೋವಿಡ್ ಭಯದಿಂದ ಶಾಲೆಗೆ ಹೋಗಲು ಇಷ್ಟವಿಲ್ಲದ ವಿದ್ಯಾರ್ಥಿಗಳು ಆನ್​ಲೈನ್​ ಶಿಕ್ಷಣ ಆಯ್ಕೆ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ.

ಕೇಂದ್ರದ ಪ್ರಮುಖ ಮಾರ್ಗಸೂಚಿಗಳು ಇಂತಿವೆ

  • ಶಾಲೆಗಳಲ್ಲಿ ಸರಿಯಾದ ಸ್ವಚ್ಛತೆ, ನೈರ್ಮಲ್ಯಕ್ಕೆ ಹೆಚ್ಚಿನ ಆದ್ಯತೆ
  • ವಿದ್ಯಾರ್ಥಿಗಳು ಕುಳಿತುಕೊಳ್ಳುವ ಸ್ಥಳದಲ್ಲಿ ಕನಿಷ್ಠ 6 ಅಡಿ ಅಂತರ
  • ಸಿಬ್ಬಂದಿ ಕೊಠಡಿ, ಕಚೇರಿ, ಒಳಾಂಗಣ ಹಾಲ್​ ಸೇರಿದಂತೆ ಇತರೆ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಡ್ಡಾಯ
  • ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸಾಧ್ಯವಾಗದ ಕಾರ್ಯಕ್ರಮ ಮುಂದೂಡಲು ಸೂಚನೆ
  • ಎಲ್ಲ ವಿದ್ಯಾರ್ಥಿಗಳು, ಸಿಬ್ಬಂದಿ ಮಾಸ್ಕ್​ ಹಾಕಿಕೊಳ್ಳುವುದು ಕಡ್ಡಾಯ
  • ಮಧ್ಯಾಹ್ನದ ಊಟ ವಿತರಣೆ ವೇಳೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು
  • ಹಾಸ್ಟೆಲ್​​ಗಳಲ್ಲಿ ವಿದ್ಯಾರ್ಥಿಗಳು ವಾಸ ಮಾಡುವ ಜಾಗದಲ್ಲಿ ಅಂತರ
  • ಹಾಸ್ಟೆಲ್​ಗಳಲ್ಲಿ ಉಳಿದುಕೊಳ್ಳುವ ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆ, ಸ್ಕ್ಯಾನಿಂಗ್​
  • ಪೋಷಕರ ಅನುಮತಿಯೊಂದಿಗೆ ಮನೆಯಲ್ಲಿ ಅಧ್ಯಯನ ಮಾಡಲು ಬಯಸುವ ವಿದ್ಯಾರ್ಥಿಗಳಿಗೆ ಅವಕಾಶ

ರಾಜಸ್ಥಾನ, ಮಹಾರಾಷ್ಟ್ರ, ಕರ್ನಾಟಕ, ತಮಿಳುನಾಡು, ಪಶ್ಚಿಮ ಬಂಗಾಳ ಸೇರಿದಂತೆ ಬಹುತೇಕ ಎಲ್ಲ ರಾಜ್ಯಗಳಲ್ಲಿ ಈಗಾಗಲೇ ಶಾಲಾ-ಕಾಲೇಜ್ ಪುನಾರಂಭಗೊಂಡಿವೆ.

ABOUT THE AUTHOR

...view details