ಹೈದರಾಬಾದ್:ರಾಜ್ಯದಲ್ಲಿ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗುತ್ತಿರುವ ಹಿನ್ನೆಲೆ ಲಾಕ್‌ಡೌನ್ ಅನ್ನು ಸಂಪೂರ್ಣವಾಗಿ ತೆರವುಗೊಳಿಸಲು ಸಂಪುಟ ನಿರ್ಧರಿಸಿದೆ. ಕೊರೊನಾ ಪ್ರಕರಣಗಳ ಪ್ರಮಾಣ ಇಳಿಕೆಯಾಗುತ್ತಿದ್ದು, ರಾಜ್ಯವ್ಯಾಪಿ ಅನ್ಲಾಕ್ಗೆ ಸಂಪುಟದಲ್ಲಿ ನಿರ್ಧರಿಸಲಾಗಿದೆ. ಅದರಂತೆ ಜುಲೈ ಒಂದರಿಂದ ಶಾಲೆಯ ಬಾಗಿಲುಗಳನ್ನು ತೆರೆಯಲು ಸರ್ಕಾರ ಚಿಂತನೆ ನಡಿಸಿದೆ.
SCHOOLS RE-OPEN: ಜುಲೈ 1ರಿಂದ ಶಾಲೆಗಳು ಮತ್ತೆ ಆರಂಭ - ತೆಲಂಗಾಣ ಅನ್ಲಾಕ್ ಸುದ್ದಿ
ಜುಲೈ 1ರಿಂದ ಶಾಲೆಗಳನ್ನು ಮತ್ತೆ ಆರಂಭಿಸಲು ತೆಲಂಗಾಣ ಸರ್ಕಾರ ನಿರ್ಧರಿಸಿದ್ದು, ಇದಕ್ಕಾಗಿ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದೆ.
ಜುಲೈ 1ರಿಂದ ಶಾಲೆಗಳು ಮತ್ತೆ ಆರಂಭ
ಲಾಕ್‌ಡೌನ್ ಅನ್ನು ಸಂಪೂರ್ಣವಾಗಿ ತೆಗೆದುಹಾಕಲು ಸರ್ಕಾರ ನಿರ್ಧರಿಸಿದ್ದು, 1 ರಿಂದ ಶಿಕ್ಷಣ ಸಂಸ್ಥೆಗಳನ್ನು ಪ್ರಾರಂಭಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ಎಲ್ಲಾ ರೀತಿಯ ಶಾಲಾ-ಕಾಲೇಜ್ಗಳನ್ನು ಪೂರ್ಣ ಸಿದ್ಧತೆಯೊಂದಿಗೆ ಪುನರಾರಂಭಿಸಬೇಕು ಎಂದು ಸೂಚಿಸಲಾಗಿದೆ. ಅವರು ಆಫ್‌ಲೈನ್ ತರಗತಿಗಳಿಗೆ ಹಾಜರಾಗಬಹುದು ಎಂದು ಹೇಳಿದರು.
ಇತ್ತೀಚಿನ ನಿರ್ಧಾರದ ಹಿನ್ನೆಲೆ ಅಧಿಕಾರಿಗಳು ಸಂಪೂರ್ಣ ತಯಾರಿ ನಡೆಸುತ್ತಿದ್ದಾರೆ. ವಿದ್ಯಾರ್ಥಿಗಳು ಆಫ್‌ಲೈನ್ ತರಗತಿಗಳಿಗೆ ಹಾಜರಾಗುತ್ತಿರುವ ಹಿನ್ನೆಲೆ ಸೂಕ್ತ ಮುನ್ನೆಚ್ಚರಿಕೆ ವಹಿಸುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದೆ.