ನವದೆಹಲಿ :ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ಮಿತಿಮೀರಿರುವ ಕಾರಣ ಸೋಮವಾರದಿಂದ ಒಂದು ವಾರ ಶಾಲೆಗಳು ಬಂದ್(Schools Shut) ಆಗಲಿವೆ. ಸರ್ಕಾರಿ ಕಚೇರಿ ಸಿಬ್ಬಂದಿ ಮನೆಯಿಂದಲೇ(Work from Home) ಕೆಲಸ ನಿರ್ವಹಿಸಲಿದ್ದಾರೆ.
ಇದಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ಹಂಚಿಕೊಂಡಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್(Chief Minister Arvind Kejriwal), ರಾಷ್ಟ್ರ ರಾಜಧಾನಿಯಲ್ಲಿ ವಿಷಕಾರಿ ಹೊಗೆ ಆವರಿಸಿದೆ.
ಅದರ ವಿರುದ್ಧ ಹೋರಾಡುವ ಅಗತ್ಯವಿದೆ. ಹೀಗಾಗಿ, ಒಂದು ವಾರಗಳ ಕಾಲ ನಗರದಾದ್ಯಂತ ಶಾಲೆಗಳು ಸಂಪೂರ್ಣವಾಗಿ ಬಂದ್ ಆಗಲಿವೆ ಎಂದಿದ್ದಾರೆ. ನವೆಂಬರ್ 14ರಿಂದ 17ರವರೆಗೆ ಕಟ್ಟಡ ನಿರ್ಮಾಣ ಕಾರ್ಯ ಸಂಪೂರ್ಣ ಬಂದ್ ಆಗಲಿದೆ ಎಂದಿದ್ದಾರೆ.
ರಾಜಧಾನಿಯಲ್ಲಿ ವಾಯುಮಾಲಿನ್ಯ(Delhi Air Crisis) ಸಂಪೂರ್ಣವಾಗಿ ಹದಗೆಟ್ಟಿರುವ ಕಾರಣ ದೆಹಲಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದ ಸುಪ್ರೀಂಕೋರ್ಟ್, ಲಾಕ್ಡೌನ್ ಘೋಷಣೆ ಮಾಡುವಂತೆ ಸಲಹೆ ನೀಡಿತ್ತು. ಇದರ ಬೆನ್ನಲ್ಲೇ ಆಪ್ ಸರ್ಕಾರ ಈ ಮಹತ್ವದ ನಿರ್ಧಾರ ಕೈಗೊಂಡಿದೆ. ಆದರೆ ಲಾಕ್ಡೌನ್ ಘೋಷಣೆ ಬಗ್ಗೆ ಯಾವುದೇ ರೀತಿಯ ನಿರ್ಧಾರ ಕೈಗೊಂಡಿಲ್ಲ.